ಕುರುಬ ಅಭಿವೃದ್ಧಿ ಪ್ರಾಧಿಕಾರ ರಚಿಸಿ 500 ಕೋಟಿ ನೀಡಿ : ಹೆಚ್.ವಿಶ್ವನಾಥ್
ಬೆಂಗಳೂರು : ನೀವು ಸಿಎಂ ಆಗಲು ಕಾರಣರಾದವರನ್ನು ಮಂತ್ರಿ ಮಾಡಿ ಎಂದು ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಆಗ್ರಹಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪನವರೇ ನೀವು ಮುಖ್ಯಮಂತ್ರಿ ಆಗಲಿಕ್ಕೆ ನಾಲ್ಕು ಕುರುಬ ಸಮುದಾಯದ ಶಾಸಕರು ತ್ಯಾಗ ಮಾಡಿದ್ದಾರೆ.
ಅದರಲ್ಲಿ ಭೈರತಿ ಬಸವರಾಜುಗೆ ಸಚಿವ ಸ್ಥಾನ ನೀಡಿದ್ದಾರಾ. ಇನ್ನುಳಿದ ಮೂವರಿಗೂ ಸಚಿವ ಸ್ಥಾನ ನೀಡಬೇಕು ಎಂದು ಮನವಿ ಆಗ್ರಹ ಮಾಡಿದರು. ದೆಹಲಿ ಒತ್ತಡ ಇಲ್ಲ, ಲಿಂಗಾಯತರು ಒಬಿಸಿಗೆ ಸೇರೋದು ಅಪರಾಧವೇ: ಸಚಿವ ಮಾಧುಸ್ವಾಮಿ ಪ್ರಶ್ನೆ..!
ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಪ್ರತಿಕ್ರಿಯಿಸಿ, ಕಾಂಗ್ರೆಸ್ ಹಾಗೂ ಬಿಜೆಪಿ ದೆಹಲಿ ಬೇಸ್ ಪಕ್ಷಗಳಾಗಿವೆ. ಯಾವಾಗ ಅನುಮತಿ ಸಿಗುತ್ತದೆ ಆಗ ಸಂಪುಟ ವಿಸ್ತರಣೆ ಮಾಡುತ್ತಾರೆ ಎಂದರು.
ಕುರುಬ ಸಮುದಾಯದ ಸ್ವಾಮೀಜಿಗಳು, ಜನಪ್ರತಿನಿಧಿಗಳು ಸಿಎಂ ಬಿಎಸ್ ವೈ ಭೇಟಿ ಮಾಡಿ ಮೂರು ಪ್ರಮುಖ ಬೇಡಿಕೆ ಇಟ್ಟಿದ್ದಾರೆ.
ಕುರುಬ ಸಮುದಾಯವನ್ನು ಎಸ್ ಟಿ ಪಟ್ಟಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸು ಮಾಡಿ ಎಂದು ಮನವಿ ಮಾಡಿದ್ದೇವೆ. `ಪಕ್ಷದಲ್ಲಿ ಮೂಲ – ವಲಸಿಗರ ಗುದ್ದಾಟ’ ಇರೋದು ಒಪ್ಪಿಕೊಂಡ ಅಶ್ವಥ್
ಕುರುಬ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿ 500 ಕೋಟಿ ನೀಡಬೇಕು ಎಂದು ಆಗ್ರಹಿಸಲಾಗಿದೆ ಎಂದು ಇದೇ ವೇಳೆ ವಿಶ್ವನಾಥ್ ತಿಳಿಸಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel