ವಿಜಯನಗರ ಜಿಲ್ಲೆ ರಚನೆ ಬೆನ್ನಲ್ಲೇ ಹುಣಸೂರು ಪ್ರತ್ಯೇಕ ಜಿಲ್ಲೆಗೆ ಬೇಡಿಕೆ
ಬೆಂಗಳೂರು : ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ವಿಜಯನಗರ ನೂತನ ಜಿಲ್ಲೆ ರಚನೆ ಬೆನ್ನಲ್ಲೆ ಹುಣಸೂರು ಪ್ರತ್ಯೇಕ ಜಿಲ್ಲೆಗೆ ಬೇಡಿಕೆ ಆರಂಭವಾಗಿದೆ.
ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್, ದೇವರಾಜ್ ಅರಸು ಹೆಸರಲ್ಲಿ ಹುಣಸೂರನ್ನು ಜಿಲ್ಲೆಯನ್ನಾಗಿ ಘೋಷನೆ ಮಾಡಿ ಎಂದು ಒತ್ತಾಯಿಸಿದ್ದಾರೆ.
ನಗರದ ವಿಧಾನಸೌಧದಲ್ಲಿ ಮಾತನಾಡಿದ ಹೆಚ್.ವಿಶ್ವನಾಥ್, ಬಿ ಎಸ್ ಯಡಿಯೂರಪ್ಪ ಅಧಿಕಾರ ಅವಧಿಯಲ್ಲಿ ಹುಣಸೂರು ಜಿಲ್ಲೆ ಮಾಡಿ ಎಂದು ಬೇಡಿಕೆ ಇಟ್ಟಿದ್ದೇವೆ.
ಆರು ತಾಲ್ಲೂಕು ಸೇರಿ ದೇವರಾಜ್ ಅರಸ್ ಹೆಸರಿನಲ್ಲಿ ಜಿಲ್ಲೆ ಮಾಡಿ ಎಂದು ಬೇಡಿಕೆ ಇರಿಸಿದ್ದೇವೆ ಎಂದು ತಿಳಿಸಿದರು. ಲಿಂಗಾಯತರಿಗೆ ಮೀಸಲಾತಿಗೆ ಬಿಜೆಪಿ ಹೈಕಮಾಂಡ್ ಕೊಕ್ಕೆ: ಪಂಚಮಸಾಲಿ ಸ್ವಾಮೀಜಿ ಹೋರಾಟದ ಎಚ್ಚರಿಕೆ..!
ಮೈಸೂರು ನಗರದ ಒತ್ತಡ ಕಾರಣದಿಂದ ಜಿಲ್ಲಾಧಿಕಾರಿ ಹುಣಸೂರು ಭಾಗಕ್ಕೆ ಅಪರೂಪಕ್ಕೆ ಬರುತ್ತಾರೆ. ಹೀಗಾಗಿ ಹುಣಸೂರನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಮಾಡಬೇಕು ಎಂದು ಆಗ್ರಹಿಸಿದರು.
ಹೊಸ ಜಿಲ್ಲೆ ಉದಯ
ಭಾರಿ ವಿರೋಧದ ನಡುವೆ ಬಳ್ಳಾರಿ ಜಿಲ್ಲೆಯನ್ನು 2 ಜಿಲ್ಲೆಗಳನ್ನಾಗಿ ವಿಭಜಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮಂಗಳೂರಲ್ಲಿ ವಿವಾದಿತ ಬರಹ : ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ
ನೂತನ ವಿಜಯನಗರ ಜಿಲ್ಲೆಗೆ ಆರು ತಾಲೂಕುಗಳನ್ನು ಸೇರ್ಪಡೆ ಮಾಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ವಿಜಯನಗರ ಜಿಲ್ಲೆಗೆ ಹೊಸಪೇಟೆ ಜಿಲ್ಲಾಕೇಂದ್ರವಾಗಿರಲಿದೆ.
ಸದ್ಯ ಬಳ್ಳಾರಿ ಜಿಲ್ಲೆಯಲ್ಲಿದ್ದ ಹೊಸಪೇಟೆ, ಹರಪನಹಳ್ಳಿ, ಹೂವಿನ ಹಡಗಲಿ, ಹಗರಿ ಬೊಮ್ಮನಹಳ್ಳಿ, ಕೊಟ್ಟೂರು, ಕೂಡ್ಲಿಗಿ ತಾಲೂಕುಗಳನ್ನು ವಿಜಯನಗರ ಜಿಲ್ಲೆಗೆ ಸೇರ್ಪಡೆ ಮಾಡಲು ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ.
ವಿಜಯನಗರ ಜಿಲ್ಲೆಗೆ ಆರು ತಾಲೂಕುಗಳನ್ನು ಸೇರ್ಪಡೆ ಮಾಡಿದ ಬಳಿಕ ಬಳ್ಳಾರಿ ಜಿಲ್ಲೆಗೆ ಸದ್ಯ ಐದು ತಾಲೂಕುಗಳು ಉಳಿದಿವೆ.
ಬಳ್ಳಾರಿ, ಸಿರಗುಪ್ಪ, ಸಂಡೂರು, ಕಂಪ್ಲಿ ಮತ್ತು ಕುರಗೋಡು ತಾಲೂಕುಗಳು ಬಳ್ಳಾರಿ ಜಿಲ್ಲೆಯ ಭಾಗವಾಗಿ ಮುಂದುವರಿಯಲಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel










