“ಮುಖ್ಯಮಂತ್ರಿಗಳೇ ಕಂಪ್ಲೀಟ್ ಲಾಕ್ ಡೌನ್ ಮಾಡಿ”
ಮೈಸೂರು : ರಾಜ್ಯದಲ್ಲಿ ಕೊರೊನಾ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪರಿಸ್ಥಿತಿ ಹೀಗೆ ಬಿಟ್ಟರೇ ಮುಂದೆ ತೊಂದರೆ ಆಗಲಿದೆ. ಹೀಗಾಗಿ ರಾಜ್ಯದಲ್ಲಿ ಈಗಲೇ ಕಂಪ್ಲೀಟ್ ಲಾಕ್ ಡೌನ್ ಮಾಡಬೇಕೆಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ h-vishwanath ಅಭಿಪ್ರಾಯಪಟ್ಟಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ, ನಿಯಂತ್ರಣಕ್ಕೆ ಸಿಗುತ್ತಿಲ್ಲ.
ಅರ್ಧ ಲಾಕ್ ಡೌನ್ ಮಾಡಿರುವುದರಿಂದ ಕೊರೊನಾ ಕಂಟ್ರೋಲ್ ಮಾಡಲು ಸಾಧ್ಯವಿಲ್ಲ. ಕೊರೊನಾ ತಡೆಗಟ್ಟುವ ಬದಲು ಹೆಚ್ಚಾಗುತ್ತಿದೆ.
ಹೀಗಾಗಿ ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಮಾಡಿ ಎಂದು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಂಡರು.
ಅರ್ಧ ಲಾಕ್ ಡೌನ್ ನಲ್ಲಿ ಬೆಳಗ್ಗೆ 6 ರಿಂದ 10 ಗಂಟೆ ವರೆಗೆ ಅಗತ್ಯ ವಸ್ತುಗಳು, ಮದ್ಯಕೊಳ್ಳಲು ಅವಕಾಶ ನೀಡಲಾಗಿದೆ.
ಇದರಿಂದ ಜನರು ಗುಂಪು ಗುಂಪಾಗಿ ಹೊರ ಬರುತ್ತಿದ್ದಾರೆ. ಇದು ಕೊರೊನಾ ಹರಡಲು ಕಾರಣವಾಗುತ್ತಿದೆ.
ಕೊರೊನಾ ಕಡಿವಾಣ ಹಾಕಲು ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿಯಾಗಲೇಬೇಕು ಎಂದು ಆಗ್ರಹಿಸಿದ್ದಾರೆ.