ಧಾರವಾಡ : ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಎಂಟಿಬಿ ನಾಗರಾಜ್ ಹಾಗೂ ಹೆಚ್.ವಿಶ್ವನಾಥ್ ತ್ಯಾಗ ಮಾಡಿದ್ದಾರೆ. ಹೀಗಾಗಿ ಅವರಿಗೂ ಮಂತ್ರಿ ಸ್ಥಾನ ನೀಡಬೇಕೆಂದು ಸಚಿವ ಶ್ರೀಮಂತ ಪಾಟೀಲ್ ಅವರು ಆಗ್ರಹಿಸಿದ್ದಾರೆ.
ಧಾರವಾಡದಲ್ಲಿ ಮಾತನಾಡಿದ ಅವರು, ಹೆಚ್. ವಿಶ್ವನಾಥ್ ಹಾಗೂ ಎಂಟಿಬಿ ನಾಗರಾಜ್ ತ್ಯಾಗ ಮಾಡಿ ಬಂದವರು. ಈ ಸರ್ಕಾರ ರಚನೆಗೆ ಅವರ ಸಹಕಾರ ಬಹಳ ಸಿಕ್ಕಿದೆ. ಅವರಿಗೆ ಸಚಿವ ಸ್ಥಾನ ಸಿಕ್ಕರೆ ಒಳ್ಳೆಯದು. ಆದ್ರೆ ಇದು ಪಕ್ಷದ ವರಿಷ್ಠರಿಗೆ ಬಿಟ್ಟ ವಿಚಾರ. ಅಲ್ಲದೇ ಇದನ್ನು ಪಕ್ಷದ ಹೈಕಮಾಂಡ್ ತೀರ್ಮಾನ ಮಾಡುತ್ತೆ ಎಂದು ಶ್ರೀಮಂತ ಪಾಟೀಲ್ ಹೇಳಿದ್ದಾರೆ.
ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಪಡೆದವರು ಅಸಮಾಧಾನದ ವಿಚಾರವಾಗಿ ಮಾತನಾಡಿದ ಸಚಿವರು, ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ. ನಮ್ಮ ಪಕ್ಷದ ಮುಖಂಡರು ಎಲ್ಲ ಸರಿ ಪಡಿಸ್ತಾರೆ. ಯಾವುದೇ ತೊಂದರೆ ಆಗದಂತೆ ನೋಡಿಕೊಳ್ತಾರೆ ಎಂದು ಹೇಳಿದರು.








