ವಿರೋಧ ಪಕ್ಷದಲ್ಲಿದ್ದಾಗ ವಿರೋಧಿಸಿ ಈಗ ಜಿಂದಾಲ್ ಗೆ ಭೂಮಿ ಮಾರಿದ ಬಿಜೆಪಿ
ಮೈಸೂರು : ಜಿಂದಾಲ್ ಕಂಪನಿಗೆ ಭೂಮಿ ಮಾರಾಟ ಮಾಡಿರುವ ವಿಚಾರ ಕೊರೊನಾ ಮಧ್ಯೆಯೂ ಭಾರಿ ಸದ್ದು ಮಾಡುತ್ತಿದೆ. ಸರ್ಕಾರದ ಈ ನಡೆಗೆ ಸ್ವತಃ ಸ್ವಪಕ್ಷದವರೇ ವಿರೋಧ ವ್ಯಕ್ತಪಡಿಸಿದ್ದಾರೆ. ಅದರಲ್ಲೂ ಎಂಎಲ್ ಸಿ ಹೆಚ್ ವಿಶ್ವನಾಥ್, ಈ ಕುರಿತು ಸುದ್ದಿಗೋಷ್ಠಿ ನಡೆಸಿ ರಾಜ್ಯದಲ್ಲಿ ಹಗಲು ದರೋಡೆ ನಡೆಯುತ್ತಿದೆ. ಜಿಂದಾಲ್ ಗೆ ಭೂಮಿ ನೀಡಿದರ ಹಿಂದೆ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ್ದಾರೆ.

ಜಿಂದಾಲ್ ಗೆ ಭೂಮಿ ನೀಡಿದರ ಬಗ್ಗೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಿಂದಾಲ್ ಕಂಪನಿಗೆ ಭೂಮಿ ಮಾರಾಟ ಮಾಡಿರುವ ಕ್ರಮ ಸರಿಯಿಲ್ಲ. ಇದರ ಹಿಂದೆ ವ್ಯವಹಾರ ನಡೆದಿದೆ. ಈ ಬಗ್ಗೆ ಪ್ರಧಾನಮಂತ್ರಿಯವರಿಗೆ ಪತ್ರ ಬರೆಯುತ್ತೇನೆ. ರಾಜ್ಯದಲ್ಲಿ ಹಗಲು ದರೋಡೆ ನಡೆಯುತ್ತಿದೆ ಎಂದು ಆರೋಪಿಸಿದರು.
ಇನ್ನು ಇದೇ ವಿಚಾರಕ್ಕೆ ಹಿಂದೆ ಬಿಜೆಪಿ ವಿರೋಧ ಪಕ್ಷದಲ್ಲಿದ್ದಾಗ ವಿರೋಧಿಸಿತ್ತು. ಆದ್ರೀಗ ಅದೇ ಮಾರಾಟ ಮಾಡಿದೆ.
ಈಗ ಇಡೀ ರಾಜ್ಯವೇ ಕೋವಿಡ್ ನಿಂದ ಬಳಲುತ್ತಿದೆ. ಬೆಡ್ ಇಲ್ಲ, ಆಕ್ಸಿಜನ್ ಇಲ್ಲ, ಆಸ್ಪತ್ರೆಗಳು ಇಲ್ಲ. ಇಂತಹ ಸಮಯದಲ್ಲಿ ಜಿಂದಾಲ್ ಖಾಸಗಿ ಕಂಪನಿಗೆ ಭೂಮಿಯನ್ನು ಪರಭಾರೆ ಮಾಡುವ ಅಗತ್ಯ ಏನಿತ್ತು ಎಂದು ಪ್ರಶ್ನೆ ಮಾಡಿದ್ದಾರೆ.









