H Vishwanath | ನನಗೆ ಸಚಿವಸ್ಥಾನ ಬೇಡ.. ರಾಮದಾಸ್ ಗೆ ನೀಡಿ : ಹೆಚ್.ವಿಶ್ವನಾಥ್
ಮೈಸೂರು : ರಾಜ್ಯದಲ್ಲಿ ಮತ್ತೆ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಆರಂಭವಾಗಿದೆ. ಶೀಘ್ರದಲ್ಲಿಯೇ ಸಂಪುಟ ವಿಸ್ತರಣೆ ನಡೆಯಲಿದೆ ಎಂದು ಹೇಳಲಾಗುತ್ತಿದೆ. H Vishwanath reaction karnataka cabinet extend saaksha tv
ಈ ಬಗ್ಗೆ ಎಂಎಲ್ ಸಿ ಹೆಚ್.ವಿಶ್ವನಾಥ್ ಪ್ರತಿಕ್ರಿಯೆ ನೀಡಿದ್ದು, ನಾನು ಸಚಿವ ಸ್ಥಾನದ ರೇಸ್ ನಲ್ಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದಾಗ ಹೆಚ್ ವಿಶ್ವನಾಥ್ ಸಚಿವ ಸ್ಥಾನಕ್ಕಾಗಿ ಸಾಕಷ್ಟು ಪ್ರಯತ್ನಪಟ್ಟಿದ್ದರು.
ಇದೀಗ ಮತ್ತೆ ಸಂಪುಟ ವಿಸ್ತರಣೆ ಚರ್ಚೆ ಮುನ್ನಲೆಗೆ ಬಂದಿರುವುದರಿಂದ ಸಾಮಾನ್ಯವಾಗಿ ವಿಶ್ವನಾಥ್ ಮಂತ್ರಿಗಿರಿ ಆಕಾಂಕ್ಷಿ ಎಂದು ಹೇಳಲಾಗುತ್ತಿತ್ತು. ಆದ್ರೆ ಅದನ್ನು ಅಲ್ಲಗೆಳೆದಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ವಿಶ್ವನಾಥ್, ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ.
ಈ ಬಾರಿ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಮೈಸೂರು ಭಾಗಕ್ಕೆ ಒಂದು ಸಚಿವ ಸ್ಥಾನ ನೀಡಿ.
ಹಿರಿಯರಾದ ಎಸ್ ಎ ರಾಮದಾಸ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಮುಖ್ಯಮಂತ್ರಿಗಳನ್ನು ಒತ್ತಾಯಿಸುತ್ತೇನೆ ಎಂದು ತಿಳಿಸಿದರು.