ವಿಜಯೇಂದ್ರ ಮಾಡಿದ ಮಹಾ ಭ್ರಷ್ಟಾಚಾರಕ್ಕೆ ಈ ದಾಳಿ ಸಾಕ್ಷಿ : ಹೆಚ್.ವಿಶ್ವನಾಥ್
ಮೈಸೂರು : ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಆಪ್ತ ಉಮೇಶ್ ಮನೆ ಮೇಲೆ ಐಟಿ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಎಂಎಲ್ ಸಿ ಹೆಚ್ ವಿಶ್ವನಾಥ್ ಪ್ರತಿಕ್ರಿಯೆ ನೀಡಿದ್ದು, ಬಿ.ವೈ.ವಿಜಯೇಂದ್ರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಮೈಸೂರಿನಲ್ಲಿ ಸುದ್ದಿವಾಹಿನಿಯೊಂದಿಗೆ ಮಾತನಾಡಿದ ಹೆಚ್ ವಿಶ್ವನಾಥ್, ಇದು ಟಾರ್ಗೆಟ್ ಯಡಿಯೂರಪ್ಪ ಅಲ್ಲ. ಇದು ಟಾರ್ಗೆಟ್ ಕರಪ್ಷನ್.
ನಾನು ಹಿಂದೆ ಮಾಡಿದ ಆರೋಪಗಳು ಈ ದಾಳಿ ಮೂಲಕ ಸತ್ಯವಾಗಿದೆ. ವಿಜಯೇಂದ್ರ ಮಾಡಿದ ಮಹಾ ಭ್ರಷ್ಟಾಚಾರಕ್ಕೆ ಈ ದಾಳಿ ಇನ್ನೊಂದು ಸಾಕ್ಷಿ ಎಂದು ವಿಶ್ಲೇಷಿಸಿದ್ದಾರೆ.
ಅಲ್ಲದೆ ಮುಖ್ಯಮಂತ್ರಿಸ್ಥಾನದಿಂದ ಯಡಿಯೂರಪ್ಪ ಕೆಳಗಿಳಿದ್ದಿದ್ದು ವಯಸ್ಸಿನ ಕಾರಣದಿಂದಲ್ಲ. ಮಗ ಮಾಡಿದ ಭ್ರಷ್ಟಾಚಾರದ ಕಾರಣಕ್ಕಾಗಿ ಅವರು ಕೆಳಗೆ ಇಳಿದರು. ಈ ದಾಳಿ ಪರೋಕ್ಷವಾಗಿ ವಿಜಯೇಂದ್ರ ಮೇಲೆ ಆದ ದಾಳಿ ಎಂದು ವಿಶ್ವನಾಥ್ ಹೇಳಿದ್ದಾರೆ.