ಮೈಸೂರು : ಮಾಜಿ ಸಚಿವ ಹೆಚ್. ವಿಶ್ವನಾಥ್ ಅವರ ಮೊಮ್ಮಗ ಮೃತಪಟ್ಟಿದ್ದಾರೆ. ವಿಶ್ವನಾಥ್ ಅವರ ಸಹೋದರಿಯ ಮೊಮ್ಮಗ ಜುಲೈ 3 ರಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಇಂದು ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.
ಮೈಸೂರಿನ ಶಾರದಾದೇವಿ ನಗರದಲ್ಲಿ ನೆಲೆಸಿದ್ದ ಕಾರ್ತಿಕ್ ಅವರು, ಜುಲೈ 3 ರಂದು ಬೈಕ್ ನಲ್ಲಿ ತೆರಳುವಾಗ ಕುವೆಂಪುನಗರದ ಬಳಿ ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ಗಾಯಗೊಂಡಿದ್ದರು. ಕೂಡಲೇ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದ್ರೆ ಇಂದು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.








