ವಿಶ್ವಸಂಸ್ಥೆ ಘೋಷಿತ ಜಾಗತಿಕ ಉಗ್ರ ಹಾಗು 26/11 ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ಮೊನ್ನೆ ತಾನೆ ಶಿಕ್ಷೆಗೆ ಒಳಗಾಗಿ ಜೈಲು ಸೇರಿದ್ದ. ನಂತರ ನಡೆದ ಹೈಡ್ರಾಮ ಪರಿಣಾಮದಿಂದ ಕೂಡಲೇ ಜೈಲಿನಿಂದ ಬಿಡುಗಡೆ ಆಗುವ ಸುದ್ದಿ ತಿಳಿದುಬಂದಿದೆ. ಪಾಕ್ ನ ಹಣಕಾಸು ವ್ಯವಸ್ಥೆಯ ಮೇಲಿನ ಕಣ್ಗಾವಲು ಸಂಸ್ಥೆ (ಎಫ್ಎಟಿಎಫ್) ತೀರ್ಪಿನ ನಂತರ ಆತನನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಪಾಕಿಸ್ತಾನದ ನ್ಯಾಯಾಲಯ ಹಫೀಜ್ ಸಯೀದ್ ಗೆ ಭಯೋತ್ಪಾದನೆಗೆ ಸಂಬಂಧಿಸಿದಂತೆ ಜೈಲು ಶಿಕ್ಷೆ ವಿಧಿಸಿತ್ತು. ಎಫ್ಎಟಿಎಫ್ ಪಾಕಿಸ್ತಾನದ ವಿಷಯದಲ್ಲಿ ತೀರ್ಮಾನ ಕೈಗೊಂಡ ನಂತರ ಪಾಕ್ ನ ಭಯೋತ್ಪಾದನೆ ನಿಗ್ರಹ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸುತ್ತೇವೆ ಎಂದು ಹಫೀಜ್ ಸಯೀದ್ ನ ವಕೀಲರು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಹಫೀಜ್ ಸಯೀದ್ ಜೈಲು ಶಿಕ್ಷೆಯಿಂದ ತಪ್ಪಿಸಿಕೊಳ್ಳುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ. ಒಟ್ಟಿನಲ್ಲಿ ಪಾಕ್ ಸರ್ಕಾರದ ಮೇಲೆ ಪ್ರಬಲ ಹಿಡಿತವನ್ನು ಹೊಂದಿರುವ ಉಗ್ರ ಹಫೀಜ್ ಗೆ ಪಾಕ್ ನ್ಯಾಯಾಂಗ ವ್ಯವಸ್ಥೆಯಿಂಧ ಏನೂ ಮಾಡಲು ಸಾಧ್ಯವಿಲ್ಲ ಎನ್ನುವ ಚರ್ಚೆಗಳು ನಡೆಯುತ್ತಿವೆ.
ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ
ಭಾರತೀಯರ ಪಾಲಿಗೆ ಚಿನ್ನ ಕೇವಲ ಆಭರಣವಲ್ಲ, ಅದೊಂದು ಭಾವನೆ, ಪರಂಪರೆ ಮತ್ತು ಆಪತ್ಕಾಲದಲ್ಲಿ ಕೈಹಿಡಿಯುವ ಅತಿ ದೊಡ್ಡ ಆಸ್ತಿ. ಮನೆಯಲ್ಲಿ ಒಂದು ಶುಭ ಕಾರ್ಯ ನಡೆಯಲಿ ಅಥವಾ...








