Halal : ʼಭಾರತವನ್ನು ಒಡೆಯುವ ವಿಷಬೀಜಾಸುರರನ್ನು ಹಿಮ್ಮೆಟ್ಟಿಸೋಣ’ : ಹೆಚ್ ಡಿಕೆ ಕರೆ

1 min read
Agahanashini River H D Kumaraswamy tweet saaksha tv

Halal : ʼಭಾರತವನ್ನು ಒಡೆಯುವ ವಿಷಬೀಜಾಸುರರನ್ನು ಹಿಮ್ಮೆಟ್ಟಿಸೋಣ’ : ಹೆಚ್ ಡಿಕೆ ಕರೆ

ಬೆಂಗಳೂರು : ಅನಾದಿ ಕಾಲದಿಂದ ಯುಗಾದಿ, ವರ್ಷತೊಡಕನ್ನು ನಾವೆಲ್ಲರೂ ಆಚರಿಸಿದಂತೆ, ಈ ವರ್ಷವೂ ಆಚರಿಸೋಣ. ʼಭಾರತವನ್ನು ಒಡೆಯುವ ವಿಷಬೀಜಾಸುರರನ್ನು ಹಿಮ್ಮೆಟ್ಟಿಸೋಣ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕರೆಕೊಟ್ಟಿದ್ದಾರೆ.

ಹಲಾಲ್ ವಿಚಾರವಾಗಿ ಕುಮಾರಸ್ವಾಮಿ ಸರಣಿ ಟ್ವೀಟ್ ಗಳನ್ನ ಮಾಡಿದ್ದು, ಅನ್ನ-ಆಹಾರದಲ್ಲಿ ಅರಾಜಕತೆ ಉಂಟು ಮಾಡಿ ಬೇಳೆ ಬೇಯಿಸಿಕೊಳ್ಳುವವರು ʼಭಾರತಕ್ಕೆ ಮತ್ತು ಭಾವೈಕ್ಯ ಪರಂಪರೆಗೆ ದೊಡ್ಡ ಅಪಾಯ.ʼ ಮನಸುಗಳ ನಡುವೆ ಯುದ್ಧವನ್ನೇ ಸೃಷ್ಟಿಸುತ್ತಿರುವ ಈ ಕಿಡಿಗೇಡಿಗಳು ಯುದ್ಧೋನ್ಮಾದ ಸರ್ವಾಧಿಕಾರಿಗಳಿಗಿಂತಲೂ ವಿನಾಶಕಾರಿ. ಇದನ್ನು ಕನ್ನಡಿಗರು ಅರ್ಥ ಮಾಡಿಕೊಳ್ಳಬೇಕು

ಯುಗಾದಿ ಹಬ್ಬದ ದಿನ ನೈಜ ಹಿಂದುಗಳು ಯಾರೂ ಮಾಂಸ ಮಾರುವುದಿಲ್ಲ, ಖರೀದಿಸುವುದೂ ಇಲ್ಲ. ಆದರೆ, ಜಟ್ಕಾ ಕಟ್ ಹೆಸರಿನಲ್ಲಿ ಕೆಲವರು ಇವತ್ತೇ ಮಾಂಸದ ಅಂಗಡಿಗಳನ್ನು ತೆರೆದಿದ್ದಾರೆ! ಇವರಾ ಹಿಂದುಗಳು? ʼಇಂಡಿಯಾದಿಂದಲೇ ಹಿಂದೂ ಧರ್ಮವನ್ನು ಮೂಲೋತ್ಪಾಟನೆ ಮಾಡುವುದೇ ಇವರ ಹಿಡನ್ ಅಜೆಂಡಾ ಆಗಿದೆʼ ಎನ್ನುವುದು ನನ್ನ ಅಭಿಪ್ರಾಯ.

halal issue h d kumaraswamy slams karnataka bjp saaksha tv

ಅನಾದಿ ಕಾಲದಿಂದ ಯುಗಾದಿ, ವರ್ಷತೊಡಕನ್ನು ನಾವೆಲ್ಲರೂ ಆಚರಿಸಿದಂತೆ, ಈ ವರ್ಷವೂ ಆಚರಿಸೋಣ. ʼಭಾರತವನ್ನು ಒಡೆಯುವ ವಿಷಬೀಜಾಸುರರನ್ನು ಹಿಮ್ಮೆಟ್ಟಿಸೋಣ.ʼ ಸರ್ವ ಜನಾಂಗದ ತೋಟ ಕರುನಾಡಿನಲ್ಲಿರುವ ಪ್ರತಿಯೊಬ್ಬರಿಗೂ ನನ್ನ ಮನವಿ ಇದು. ಇಡೀ ದೇಶಕ್ಕೆ ಮಾದರಿಯಾದ ನೆಮ್ಮದಿಯ ಕರುನಾಡನ್ನು ಕಾಪಾಡಿಕೊಳ್ಳೋಣ.

ಕರ್ನಾಟಕವು ಎಲ್ಲರನ್ನೂ ಒಳಗೊಳ್ಳುವ ಶುದ್ಧ ಅಂತಃಕರಣದ ಮನಸುಗಳದ್ದು. ಭಾವನೆಗಳ ಕೆಂಡದ ಮಳೆ ಸುರಿಸುವ ಕಿರಾತಕರದ್ದಲ್ಲ. ಜನಪೀಡಕರನ್ನು ತಿರಸ್ಕರಿಸೋಣ. ಪರಂಪರಾಗತವಾಗಿ ಬಂದಿರುವ ಯುಗಾದಿ, ವರ್ಷತೊಡಕನ್ನು ಎಂದಿನಂತೆ ಸಂಭ್ರಮಿಸುವ ಮೂಲಕ ಇವರ ಸೋಗಲಾಡಿತನಕ್ಕೆ ಇತಿಶ್ರೀ ಹಾಡೋಣ ಎಂದು ಕರೆಕೊಟ್ಟಿದ್ದಾರೆ. halal issue h d kumaraswamy slams karnataka bjp

Leave a Reply

Your email address will not be published.

YOU MUST READ

Copyright © All rights reserved | SaakshaTV | JustInit DigiTech Pvt Ltd