ಕುಮಾರಸ್ವಾಮಿ ಅವರೇ, ಗಂಡಸ್ತನದ ಬಗ್ಗೆ ಮಾತಾಡುವುದರಲ್ಲಿ “ಪುರುಷಾರ್ಥ” ಅಡಗಿದೆಯೇ?

1 min read
Kumarswamy Saaksha Tv

ಕುಮಾರಸ್ವಾಮಿ ಅವರೇ, ಗಂಡಸ್ತನದ ಬಗ್ಗೆ ಮಾತಾಡುವುದರಲ್ಲಿ “ಪುರುಷಾರ್ಥ” ಅಡಗಿದೆಯೇ?

ಬೆಂಗಳೂರು :  ಕುಮಾರಸ್ವಾಮಿ ಅವರೇ, ಗಂಡಸ್ತನದ ಬಗ್ಗೆ ಮಾತನಾಡುವುದರಲ್ಲಿ “ಪುರುಷಾರ್ಥ” ಅಡಗಿದೆಯೇ ಎಂದು ರಾಜ್ಯ ಬಿಜೆಪಿ ಕಿಡಿಕಾರಿದೆ.

ಹಲಾಲ್ ಕಟ್ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದರು. ಹೀಗಾಗಿ  ರಣಿ ಟ್ವೀಟ್ ಗಳ ಮೂಲಕ ಬಿಜೆಪಿ ತಿರುಗೇಟು ಕೊಟ್ಟಿದೆ.

ಬಾಯಿಗೆ ಬಂದಂತೆ ಮಾತನಾಡುವುದು ಆ ಬಳಿಕ ವಿಷಾದ ವ್ಯಕ್ತಪಡಿಸುವುದು ಸಾಂದರ್ಭಿಕ ಸಿಎಂ ಹೆಚ್ ಡಿ ಕುಮಾರಸ್ವಾಮಿ  ಅವರ ರಾಜಕೀಯ ವರಸೆ. ಯಾವ ವಿಚಾರದಲ್ಲಿ ತನ್ನ ಮತಬ್ಯಾಂಕ್‌ ಗಟ್ಟಿಯಾಗುತ್ತದೋ ಆ ವಿಚಾರವನ್ನು ಗಟ್ಟಿಯಾಗಿ ಹಿಡಿದುಕೊಳ್ಳುವುದು ಇವರ ಜಾಯಮಾನ. ಕುಮಾರಸ್ವಾಮಿ ಅವರೇ, ಗಂಡಸ್ತನದ ಬಗ್ಗೆ ಮಾತನಾಡುವುದರಲ್ಲಿ “ಪುರುಷಾರ್ಥ” ಅಡಗಿದೆಯೇ ಎಂದು ಕುಟುಕಿದೆ.

ಮಾನ್ಯ #LuckyDipCM ಕುಮಾರಸ್ವಾಮಿ ಅವರೇ, ಓತಿಕ್ಯಾತಕ್ಕೆ ಬೇಲಿಯ ಗೂಟ ಸಾಕ್ಷಿ ಎಂಬ ಗಾದೆ ಮಾತು ನೆನಪಿಸಿಕೊಳ್ಳಿ. ನಿಮ್ಮ ಜಾತ್ಯತೀತ ನಡೆ ಎಂಬುದು ಅವಕಾಶವಾದದ ಪರಿಷ್ಕೃತ ರೂಪ. ಅಧಿಕಾರ ಅನುಭವಿಸಲು ಏನೂ ಬೇಕಾದರೂ ಮಾಡಲು ಸಿದ್ದವಾಗಿರುವವರು ನೀವು. ನಿಮ್ಮಿಂದ ಯಾವ ವ್ಯಕ್ತಿಯೂ, ಯಾವ ಸಂಘಟನೆಯೂ ಪಾಠ ಕಲಿಯಬೇಕಾಗಿಲ್ಲ.

halal issue karnataka bjp slams h d kumaraswamy  saaksha tv

ಸಾಂದರ್ಭಿಕ ಕೂಸೊಂದು ಹಿಂದುತ್ವದ ಬಗ್ಗೆ ಹಿಂದೂ ಸಂಘಟನೆಗಳಿಗೆ ಪಾಠ ಮಾಡುತ್ತಿದೆ. ಹಿಂದೂ ಸಂಘಟನೆಗಳು ಅವರಂತೆ ಕೇವಲ ತನ್ನ ಕುಟುಂಬದ ಉನ್ನತಿಗಾಗಿ ಕೆಲಸ ಮಾಡುತ್ತಿಲ್ಲ. ಅವರು ಅಧಿಕಾರಕ್ಕಾಗಿ ಕಣ್ಣೀರು ಹಾಕುತ್ತಾರೆ ಆದರೆ ಹಿಂದೂ ಸಂಘಟನೆಗಳು ಹಿಂದೂ ಸಮಾಜದ ಕಣ್ಣೀರು ಒರೆಸುವ ಕೆಲಸ ಮಾಡುತ್ತಿವೆ.

ಉಪಸಭಾಪತಿಯ ಕುರ್ಚಿಗೆ ಗಂಟುಬಿದ್ದು ಅದು ಸಿಗದಿದ್ದಾಗ ಕಾಂಗ್ರೆಸ್‌ ತ್ಯಜಿಸಿ ಜೆಡಿಎಸ್‌ ಸೇರಿರುವ ವ್ಯಕ್ತಿಯ ಸಮುದಾಯವನ್ನು ಮೆಚ್ಚಿಸಲು ಎಚ್‌ಡಿಕೆ ಸರ್ಕಸ್‌ ಮಾಡುತ್ತಿದ್ದಾರೆ.ಇಂತಹ ಸದಾರಮೆ ನಾಟಕ ಕುಮಾರಸ್ವಾಮಿಗೆ ಹೊಸತಲ್ಲ. ಕುಮಾರ ಸ್ವಾಮಿಯ ರಾಜಕೀಯ ಜೀವನವೇ ಒಂದು ಡ್ರಾಮಾ. ಇವರ ಕುಟುಂಬವೇ ದೊಡ್ಡ ಡ್ರಾಮಾ ಕಂಪನಿ.  ಮಾನ್ಯ ಕುಮಾರಸ್ವಾಮಿಯವರೇ, ಕುರ್ಚಿಗಾಗಿ ಮಾತುಮುರಿದು #ವಚನಭ್ರಷ್ಟ ಎನಿಸಿಕೊಂಡಿದ್ದು ನೆನಪಿದೆಯೇ ಎಂದು ಬಿಜೆಪಿ ಪ್ರಶ್ನೆ ಮಾಡಿದೆ. halal issue karnataka bjp slams h d kumaraswamy 

Leave a Reply

Your email address will not be published.

YOU MUST READ

Copyright © All rights reserved | SaakshaTV | JustInit DigiTech Pvt Ltd