ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಅರ್ಧ ಲಕ್ಷ ಕೇಸ್ ಪತ್ತೆ

1 min read
Corona

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಅರ್ಧ ಲಕ್ಷ ಕೇಸ್ ಪತ್ತೆ

ನವದೆಹಲಿ : ದೇಶದಾದ್ಯಂತ ಕೊರೊನಾ ಎರಡನೇ ಅಲೆ ದಿನದಿಂದ ದಿನಕ್ಕೆ ಜೋರಾಗಿ ಅಬ್ಬರಿಸಲು ಆರಂಭಿಸಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಬರೋಬ್ಬರಿ 50 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.

ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ದೇಶದಲ್ಲಿ ನಿನ್ನೆ 53,476 ಕೋವಿಡ್ ಹೊಸ ಪ್ರಕರಣಗಳು ವರದಿಯಾಗಿದ್ದು, 251 ಸೋಂಕಿತರು ಮೃತಪಟ್ಟಿದ್ದಾರೆ.

corona cases

ಇದರೊಂದಿಗೆ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 1,17,87,534 ಕ್ಕೆ ಏರಿಕೆಯಾಗಿದೆ. ಹೆಮ್ಮಾರಿಗೆ ಬಲಿಯಾದವರ ಸಂಖ್ಯೆ 1,60,692ಕ್ಕೆ ತಲುಪಿದೆ.

ಇನ್ನು ಒಟ್ಟಾರೆ 1,17,87,534 ಕೊರೊನಾ ಸೋಂಕಿತರ ಪೈಕಿ ಇದುವರೆಗೆ 1,12,31,650 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ದೇಶದಲ್ಲಿನ್ನೂ 3,95,192 ಸಕ್ರಿಯ ಪ್ರಕರಣಗಳಿವೆ.

chinthamani
ಜಾಹೀರಾತು

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd