ಎಂಇಎಸ್ ನಿಷೇಧಿಸುವಂತೆ ಒತ್ತಾಯಿಸಿ ಅರೆ ಬೆತ್ತಲೆ ಪ್ರತಿಭಟನೆ MES saaksha tv
ಚಾಮರಾಜನಗರ : ಎಂಇಎಸ್ ಸಂಘಟನೆಯನ್ನು ನಿಷೇಧಿಸುವಂತೆ ಆಗ್ರಹಿಸಿ ವಿವಿಧ ಕನ್ನಡ ಪರ ಸಂಘಟನೆ ಕಾರ್ಯಕರ್ತರು ಇಂದು ಚಾಮರಾಜನಗರದಲ್ಲಿ ಅರೆ ಬೆತ್ತಲೆಯಾಗಿ ಲಾಠಿ ಹಿಡಿದು ಪ್ರತಿಭಟನೆ ನಡೆಸಿದರು.
ನಗರದ ಶ್ರೀಚಾಮರಾಜೇಶ್ವರ ಸ್ವಾಮಿ ದೇಗುಲದ ಎದುರು ಕರ್ನಾಟಕ ಸೇನಾಪಡೆ ಅಧ್ಯಕ್ಷ ಶ್ರೀನಿವಾಸಗೌಡ ನೇತೃತ್ವದಲ್ಲಿ ಜಮಾಯಿಸಿದ ಕನ್ನಡ ಪರ ಸಂಘಟನೆ ಕಾರ್ಯಕರ್ತರು ಅಲ್ಲಿಂದ ಅರೆ ಬೆತ್ತಲೆಯಾಗಿ ಲಾಠಿ ಹಿಡಿದು ಮೆರವಣಿಗೆ ಹೊರಟರು.
ಬಳಿಕ ರಾಷ್ಟ್ರೀಯ ಹೆದ್ದಾರಿ-209 ಹಾದು ಹೋಗಿರುವ ಶ್ರೀಭುವನೇಶ್ವರಿ ವೃತ್ತ ತಲುಪಿ ಕೆಲ ಕಾಲ ಹೆದ್ದಾರಿ ಸಂಚಾರ ತಡೆ ನಡೆಸಿ ಎಂಇಎಸ್ ವಿರುದ್ಧ ಧಿಕ್ಕಾರ ಕೂಗಿದರು.
ಎಂಇಎಸ್ ಇಷ್ಟೆಲ್ಲಾ ಪುಂಡಾಟಿಕೆ ತೋರುತ್ತಿದ್ದರೂ ರಾಜ್ಯ ಸರ್ಕಾರ ಇದನ್ನು ನಿಷೇಧ ಮಾಡುತ್ತೇವೆ ಎಂದು ಕೇವಲ ಬೂಟಾಟಿಕೆ ಮಾಡುತ್ತಿದೆ.
ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಎಂಇಎಸ್ ಗೆ ಹೆದರಿಕೊಂಡು, ನಾಲ್ಕಿರಿಂದ ಐದು ಸ್ಥಾನ ಗೆಲ್ಲುವುದರ ಸಲುವಾಗಿ ರಾಜ್ಯ ಸರ್ಕಾರದ ಜೊತೆ ಸೇರಿಕೊಂಡಿವೆ.
ಬಿಜೆಪಿ,ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳಿಗೆ ರಾಜ್ಯದ ಹಿತಾಸಕ್ತಿ ಬೇಕಾಗಿಲ್ಲ. ಇವರೆಲ್ಲ ಒಂದೆ, ಇವರ ಅನುಕೂಲಕ್ಕೆ ಅನುಗುಣವಾಗಿ ನಡೆದುಕೊಳ್ಳುತ್ತಿದ್ದಾರೆ.
ರಾಜಕೀಯ ಪಕ್ಷಗಳು ತಮ್ಮ ತೀಟೆ ತೀರಿಸಿಕೊಳ್ಳಲು ರಾಜ್ಯವನ್ನು ಬಲಿಕೊಡಲು ಮುಂದಾಗಿರುವುದು ಅತ್ಯಂತ ಖಂಡನೀಯ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.









