ಇಸ್ರೇಲ್ ಪಾಲೆಸ್ಟೈನ್ ನಡುವೆ ಘರ್ಷಣೆ – ಗಾಝಾದಲ್ಲಿನ ಖತರಿ ರೆಡ್ ಕ್ರೆಸೆಂಟ್ ಸೊಸೈಟಿಯ ಕಚೇರಿ ಮೇಲೆ ಇಸ್ರೇಲ್ ದಾಳಿ
ಇಸ್ರೇಲ್ ಹಾಗೂ ಪಾಲೆಸ್ಟೈನ್ ನಡುವೆ ನಡೆಯುತ್ತಿರುವ ಘರ್ಷಣೆಯಲ್ಲಿ ಸಾಕಷ್ಟು ಮಂದಿ ಜೀವ ಕಳೆದುಕೊಂಡಿದ್ದಾರೆ. ಇಸ್ರೇಲ್ ಮೇಲೆ ಹಮಾಸ್ ಬಂಡುಕೋರರು ನಡೆಸುತ್ತಿರುವ ವೈಮಾನಿಕ ದಾಳಿಗೆ ಇಸ್ರೇಲ್ ಸೇನೆಯೂ ಪ್ರತ್ಯುತ್ತರ ನೀಡ್ತಿದೆ. ಪ್ಯಾಲೆಸ್ಟೈನ್ ನ ಗಾಝಾ ನಗರದಲ್ಲಿರುವ ಖತರಿ ರೆಡ್ ಕ್ರೆಸೆಂಟ್ ಸೊಸೈಟಿಯ ಕಚೇರಿ ಮೇಲೆ ಇಸ್ರೇಲ್ ಯುದ್ಧವಿಮಾನವೊಂದು ದಾಳಿ ನಡೆಸಿದೆ. ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದು, 10 ಮಂದಿ ಗಾಯಗೊಂಡಿದ್ದಾರೆ.
ಇಸ್ರೇಲ್ನ ಅತಿಕ್ರಮಣಕಾರಿ ಶಕ್ತಿಗಳು ನಮ್ಮ ಕಚೇರಿಗಳ ಮೇಲೆ ಸೋಮವಾರ ದಾಳಿ ನಡೆಸಿವೆ ಎಂದು ಸೊಸೈಟಿ ಟ್ವೀಟ್ ಮಾಡಿದೆ. ಗಾಝಾದಲ್ಲಿರುವ ತನ್ನ ಪ್ರಧಾನ ಕಚೇರಿಯ ಮೇಲೆ ಇಸ್ರೇಲ್ ನಡೆಸಿರುವ ದಾಳಿಯನ್ನು ಖತರ್ ರೆಡ್ ಕ್ರೆಸೆಂಟ್ ಖಂಡಿಸುತ್ತದೆ ಹಾಗೂ ಅಂತರಾಷ್ಟ್ರೀಯ ಮಾನವೀಯತೆ ಕಾನೂನುಗಳ ಅಡಿಯಲ್ಲಿ ಕೆಲಸ ಮಾಡಲು ಪರಿಹಾರ ತಂಡಗಳಿಗೆ ಅವಕಾಶ ನೀಡಬೇಕಾದ ಅಗತ್ಯವನ್ನು ಪ್ರತಿಪಾದಿಸುತ್ತದೆ ಎಂದು ಹೇಳಿದೆ. ದಾಳಿಯು ಜಿನೀವ ಒಪ್ಪಂದದ ಸಾರಾಸಗಟು ಉಲ್ಲಂಘನೆಯಾಗಿದೆ ಎಂದು ಸೊಸೈಟಿಯ ಮಹಾಕಾರ್ಯದರ್ಶಿ ಅಲಿ ಬಿನ್ ಹಸನ್ ಅಲ್-ಹಮ್ಮಾದಿ ಹೇಳಿದ್ದಾರೆ. ಈ ಜಿನೀವ ಒಪ್ಪಂದಕ್ಕೆ ಇಸ್ರೇಲ್ ಸಹಿ ಹಾಕಿದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








