ಬೆಂಗಳೂರು: ನಾದಬ್ರಹ್ಮ ಹಂಸಲೇಖ ಅವರು ಪೇಜಾವರ ಶ್ರೀಗಳ ಬಗ್ಗೆ ನೀಡಿದ ಹೇಳಿಕೆಯಿಂದ ಅವರು ಸ್ವಲ್ಪ ವಿವಾದದಲ್ಲಿ ಸಿಲುಕಿದ್ದಾರೆ.. ಹಂಸಲೇಖ ಪರ ಅನೇಕರು ಬೆಂಬಲಿಸಿದ್ರೆ, ಅನೇಕರು ಅವರ ವಿರುದ್ಧ ಆಕ್ರೋಶಗಳನ್ನೂ ಹೊರಹಾಕಿದ್ದು, ಅವರ ವಿರುದ್ಧ ದೂರುಗಳು ದಾಖಲಾಗಿದೆ..
ಈ ನಡುವೆ ಅವರ ಆರೋಗ್ಯ ಸ್ಥಿತಿಯೂ ಸರಿಯಿಲ್ಲ ಎಂಬ ವದಂತಿಗಳು ಹರಿದಾಡಿದ್ದವು.. ಅದಕ್ಕೆ ಹಂಸಲೇಖ ಅವರು ನನ್ನ ಆರೋಗ್ಯ ಸ್ಥಿರವಾಗಿದೆ. ಸರಿಗಮಪ ನನ್ನ ಪ್ರೀತಿಯ ಭುಮಿಕೆ ಅದು ಮನಸ್ಸು, ಮನಸ್ಸುಗಳನ್ನು ನೇಯುವ ವೇದಿಕೆಯಾಗಿದೆ. ಸುಧಾರಣೆಗಳ ಸುಂದರ ಕಥೆಗಳನ್ನು ಓದಿಕೊಳ್ಳುತ್ತಿದ್ದೇನೆ. ಬೇಗ ಬಂದು ಸೇರಿಕೊಳ್ಳುತ್ತೇನೆ. MUSIC EVADES WARS ಎಂದು ಬರೆದುಕೊಂಡಿದ್ದಾರೆ.
ಕೆಲವು ದಿನಗಳ ಹಿಂದೆ ಮೈಸೂರಿನ ಮಾನಸಗಂಗೋತ್ರಿಯಲ್ಲಿಯಲ್ಲಿ ನಡೆದಿದ್ದ ಪ್ರಶಸ್ತಿ ಸಮಾರಂಭವೊಂದರ ಕಾರ್ಯಕ್ರಮದಲ್ಲಿ ಹಂಸಲೇಖ ಅವರು, ಪೇಜಾವರ ಶ್ರೀಗಳು ದಲಿತರ ಮನೆಗೆ ಹೋಗಿ ಕುಳಿತುಕೊಂಡು ಬಂದಿದ್ದಾರೆ. ಆದರೆ ದಲಿತರು ಕೋಳಿ ಕೊಟ್ರೆ ತಿಂತಾರಾ? ಕುರಿ ರಕ್ತ ಫ್ರೈ ಮಾಡಿ ಕೊಟ್ರೆ ತಿಂತಾರಾ. ಲಿವರ್ ಕೊಟ್ರೆ ತಿಂತಾರಾ? ದಲಿತರ ಮನೆಗೆ ಹೋಗುವುದು ದೊಡ್ಡ ವಿಷಯ ಅಲ್ಲ, ತಮ್ಮ ಮನೆಗೆ ಕರೆದುಕೊಂಡು ಹೋಗಿ ಅವರು ತಿಂದ ಲೋಟ, ತಟ್ಟೆ ತೊಳೆಯೋದು ದೊಡ್ಡ ವಿಷಯ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದರು.
ಸದ್ಯ ಇತ್ತೀಚೆಗಷ್ಟೇ ಬಸವನಗುಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದ ಹಂಸಲೇಖ ಅವರು ನನ್ನ ಹೇಳಿಕೆಯಿಂದ ತಪ್ಪಾಗಿದೆ. ಯಾವುದೇ ಧರ್ಮ, ಸಮಾಜ ಜಾತಿಯನ್ನು ನಿಂದಿಸೋ ಉದ್ದೇಶ ನನ್ನದಲ್ಲ. ಈ ಘಟನೆಯಿಂದ ತನಗೆ ತುಂಬಾ ನೋವಾಗಿರುವುದಾಗಿ ಹೇಳಿದ್ದರು.