ಹಾನಗಲ್, ಸಿಂದಗಿ ಉಪಕದನ | ಬಿಜೆಪಿ ಅಭ್ಯರ್ಥಿಗಳು ಪ್ರಕಟ..!

1 min read
BJP

ಹಾನಗಲ್, ಸಿಂದಗಿ ಉಪಕದನ | ಬಿಜೆಪಿ ಅಭ್ಯರ್ಥಿಗಳು ಪ್ರಕಟ..! BJP saaksha tv

ಬೆಂಗಳೂರು : ಹಾನಗಲ್ ವಿಧಾನಸಭಾ ಕ್ಷೇತ್ರ ಮತ್ತು ಸಿಂದಗಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಆಡಳಿತಾರೂಢ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಪ್ರಕಟ ಮಾಡಿದೆ.

ಹಾನಗಲ್ ವಿಧಾನಸಭಾ ಕ್ಷೇತ್ರಕ್ಕೆ ಶಿವರಾಜ್ ಸಜ್ಜನವರ್ ಹಾಗೂ ಸಿಂಧಗಿಯಿಂದ ಮಾಜಿ ಶಾಸಕ ರಮೇಶ್ ಭೂಸನೂರುಗೆ ಟಿಕೆಟ್ ಘೋಷಿಸಲಾಗಿದೆ. ಈ ಇಬ್ಬರೂ ನಾಳೆ ತಮ್ಮ ತಮ್ಮ ಕ್ಷೇತ್ರಗಳಲ್ಲಿ ಅಧಿಕೃತವಾಗಿ ನಾಮಪತ್ರ ಸಲ್ಲಿಸಲಿದ್ದಾರೆ.

BJP saaksha tv

ಮುಖ್ಯವಾಗಿ ಹಾನಗಲ್ ವಿಧಾನಸಭಾ ಕ್ಷೇತ್ರ ಬಿಜೆಪಿಗೆ ಪ್ರತಿಷ್ಠೆಯ ಕಣವಾಗಿದೆ. ಅದರಲ್ಲೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತವರು ಜಿಲ್ಲೆಯಾಗಿರುವುದರಿಂದ ಹಾನಗಲ್ ನಲ್ಲಿ ಕೇಸರಿ ಬಾವುಟ ಏರಿಸಲೇ ಬೇಕಾದ ಒತ್ತಡದಲ್ಲಿದೆ ಬಿಜೆಪಿ.

ಇನ್ನು ಸದ್ಯ ಬಿಜೆಪಿ ಟಿಕೆಟ್ ಪಡೆದವರು ನಾಳೆ ತಮ್ಮ ತಮ್ಮ ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ ಮಾಡಲಿದ್ದು, ಇದೇ ತಿಂಗಳ 30ರಂದು ಚುನಾವಣೆ ನಡೆದು ನವೆಂಬರ್ 2ರಂದು ಫಲಿತಾಂಶ ಪ್ರಕಟವಾಗಲಿದೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd