ಫಾರ್ಮ್ ನಲ್ಲಿದ್ದ ಅಯ್ಯರ್ ಬದಲು ವಿಹಾರಿಗೆ ಚಾನ್ಸ್.. ಯಾಕೆ..? shreyas-iyer saaksha tv
ವಾಂಡರರ್ಸ್: ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಬೆನ್ನು ನೋವಿನಿಂದಾಗಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಕೊನೆಯ ಕ್ಷಣದಲ್ಲಿ ಪಂದ್ಯದಿಂದ ಹಿಂದೆ ಸರಿದರು.
ಈ ಹಿನ್ನೆಲೆಯಲ್ಲಿ ಕೆಎಲ್ ರಾಹುಲ್ ಹಂಗಾಮಿ ನಾಯಕರಾಗಿ ಅಧಿಕಾರ ವಹಿಸಿಕೊಂಡರು. ಆದರೆ, ಕೊಹ್ಲಿ ಸ್ಥಾನಕ್ಕೆ ಫಾರ್ಮ್ ನಲ್ಲಿದ್ದ ಶ್ರೇಯಸ್ ಅಯ್ಯರ್ ಬದಲಿಗೆ ಹನುಮ ವಿಹಾರಿ ಅವರನ್ನು ಆಯ್ಕೆ ಮಾಡಿರೋದು ಚರ್ಚೆಗೆ ಗ್ರಾಸವಾಗಿದೆ.
ಅದರಲ್ಲೂ ತಂಡದ ಸಂಕಷ್ಟದಲ್ಲಿದ್ದಾಗ ಮೈದಾನಕ್ಕಿಳಿದ ಹನುಮ ವಿಹಾರಿ ನಿರೀಕ್ಷಿತ ಮಟ್ಟದ ಪ್ರದರ್ಶನ ನೀಡಲೇಇಲ್ಲ. ಹೀಗಾಗಿ ತಂಡದ ಆಯ್ಕೆ ಬಗ್ಗೆ ಟೀಕೆಗಳು ಕೇಳಿಬಂದಿವೆ. ಇದೀಗ ಈ ಬಗ್ಗೆ ಬಿಸಿಸಿಐ ಸ್ಪಷ್ಟನೆ ನೀಡಿದೆ.
ಶ್ರೇಯಸ್ ಅಯ್ಯರ್ ಭಾರತದಲ್ಲಿ ಕಿವೀಸ್ ವಿರುದ್ಧ ನಡೆದ ಟೆಸ್ಟ್ ಪಂದ್ಯದಲ್ಲಿ ಟೆಸ್ಟ್ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದರು.
ಚೊಚ್ಚಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಶತಕ ಸಿಡಿಸಿದ ಅಯ್ಯರ್, ದ್ವಿತೀಯ ಇನ್ನಿಂಗ್ಸ್ ನಲ್ಲಿ ಅರ್ಧಶತಕ ಸಿಡಿಸಿ ಮಿಂಚಿದ್ದರು. ಹೀಗಾಗಿ ಕೊಹ್ಲಿ ಬದಲಿಗೆ ಅಯ್ಯರ್ ಗೆ ಚಾನ್ಸ್ ಸಿಗುತ್ತೆ ಎಂದು ಹೇಳಲಾಗುತ್ತಿತ್ತು.
ಪಂದ್ಯದ ಆರಂಭದ ಹಿಂದಿನ ದಿನ ಅಯ್ಯರ್ ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ಹೀಗಾಗಿಯೇ ಅವರು ಎರಡನೇ ಟೆಸ್ಟ್ ಆಯ್ಕೆಗೆ ಲಭ್ಯರಿರಲಿಲ್ಲ ಎಂದು ಬಿಸಿಸಿಐ ವಿವರಿಸಿದೆ.
ಇದರೊಂದಿಗೆ ವಿದೇಶದಲ್ಲಿ ಆಡಿದ ಅನುಭವ ಹೊಂದಿರುವ ವಿಹಾರಿ ಅವರನ್ನು ಕೊಹ್ಲಿ ಸ್ಥಾನದಲ್ಲಿ ಆಡಿಲಾಗುತ್ತಿದೆ ಎಂದು ಸ್ಪಷ್ಟಪಡಿಸಿದೆ.
ಮತ್ತೊಂದೆಡೆ, ಸರಿಯಾಗಿ ಒಂದು ವರ್ಷದ ಬಳಿಕ ವಿಹಾರಿ ಟೀಂ ಇಂಡಿಯಾದಲ್ಲಿ ಕಾಣಿಸಿಕೊಂಡಿದ್ದಾರೆ.
2020-21ರ ಆಸ್ಟ್ರೇಲಿಯ ಪ್ರವಾಸದಲ್ಲಿ (ಜನವರಿಯಲ್ಲಿ ನಡೆದ ಸಿಡ್ನಿ ಟೆಸ್ಟ್ನಲ್ಲಿ) ವಿಹಾರಿ ಕೊನೆಯದಾಗಿ ಟೀಂ ಇಂಡಿಯಾ ಪರ ಆಡಿದ್ದರು.









