Whatsapp ಹೊಸ ಫೀಚರ್ ಅನ್ನು ಅಳವಡಿಸುತ್ತಿದ್ದೆ, ವಾಟ್ಸ್ಆ್ಯಪ್ ಹೌದು ಎರಡು ಮೊಬೈಲ್ಗಳಲ್ಲಿ ಒಂದೇ ಅಕೌಂಟ್ ಹೊಂದುವ ಫೀಚರ್ ಅನ್ನು ಅಳವಡಿಸುತ್ತಿದೆ.
ಈಗಾಗಲೆ ವಾಟ್ಸ್ಆ್ಯಪ್ ನಲ್ಲಿ ಊಹಿಸಲಾಗದ ಫೀಚರ್ ಅನ್ನು ನೀಡಿದೆ . ಈ ಫೀಚರ ಕಂಪ್ಯಾನಿಯನ್ ಮೋಡ್ ಫೀಚರ್ಸ್ ಆಗಿದ್ದು
ಇದನ್ನು ಬಳಕೆದಾರರು ಏಕಕಾಲದಲ್ಲಿ ಎರಡು ಅಥವಾ ಹೆಚ್ಚಿನ ಡಿವೈಸ್‌ಗಳಲ್ಲಿ ವಾಟ್ಸ್ಆ್ಯಪ್ ಬಳಸಬಹುದಾಗಿದೆ.
ಇದಕ್ಕೆ ಸಂಬಂಧಿಸಿದ್ದ ಕೆಲವೊಂದು ಅಪ್ಡೇಟ್ಗಳು ಬೀಟಾ ವರ್ಷನ್ನಲ್ಲಿ ಲಭ್ಯವಾಗುತ್ತಿದೆ.
ಕಂಪ್ಯಾನಿಯನ್ ಮೋಡ್ ಆಯ್ಕೆ ವಾಟ್ಸ್ಆ್ಯಪ್ನ ಈ ಹೊಸ ಕಂಪ್ಯಾನಿಯನ್ ಮೋಡ್ ಎಂಬ ಫೀಚರ್ಸ್ ಮೂಲಕ ಬಳಕೆದಾರರು ಏಕಕಾಲದಲ್ಲಿ ಎರಡು ಅಥವಾ ಹೆಚ್ಚಿನ ಡಿವೈಸ್‌ಗಳಲ್ಲಿ ವಾಟ್ಸ್ಆ್ಯಪ್ ಬಳಸಬಹುದು.
ಇದು ಬಾರ್‌ಕೋಡ್ ಸ್ಕ್ಯಾನ್ ಮಾಡುವ ಮೂಲಕ ಕಾರ್ಯನಿರ್ವಹಿಸಲಿದೆ. ಒಂದೇ ಸಮಯದಲ್ಲಿ ನಾಲ್ಕು ಡಿವೈಸ್‌ಗಳಲ್ಲಿ ಅಕೌಂಟ್ ಲಿಂಕ್ ಮಾಡಿದರೆ ಲಿಂಕ್ ಮಾಡಲಾದ ಎಲ್ಲಾ ಫೋನ್‌ಗಳಲ್ಲಿಯೂ ಚಾಟ್‌ಗಳು ಮತ್ತು ಡೇಟಾವನ್ನು ಬಳಕೆದಾರ ಸ್ವೀಕರಿಸುತ್ತಾನೆ.
ಕಂಪ್ಯಾನಿಯನ್ ಮೋಡ್ ಅನ್ನು ಆಂಡ್ರಾಯ್ಡ್ ಡಿವೈಸ್‌ಗಳಲ್ಲಿ v2.22.23.18 ಬೀಟಾ ಆವೃತ್ತಿಯಲ್ಲಿ ಪರೀಕ್ಷಿಸಲಾಗುತ್ತಿದೆ. ಈ ಆಯ್ಕೆ ಎಂಡ್ ಟು ಎಂಡ್ ಎನ್‌ಕ್ರಿಪ್ಯನ್ ಮೂಲಕ ಕೆಲಸ ಮಾಡಲಿದೆ.
ಸದ್ಯ ಈ ಹೊಸ ಆಂಡ್ರಾಯ್ಡ್‌ಗಾಗಿ ಬೀಟಾ ಬಿಲ್ಡ್‌ನಲ್ಲಿ ಮಾತ್ರ ಲಭ್ಯವಿದೆ. ಶೀಘ್ರದಲ್ಲೇ iOS ಪ್ಲಾಟ್‌ಫಾರ್ಮ್‌ನಲ್ಲಿಯೂ ಪರೀಕ್ಷಿಸಲ್ಪಡುವ ನಿರೀಕ್ಷೆಯಿದೆ.
ಇದು ಯಾವಾಗ ಲಭ್ಯವಾಗಲಿದೆ ಎಂಬುದರ ಬಗ್ಗೆ ಇನ್ನು ಯಾವುದೇ ಮಾಹಿತಿ ಬಹಿರಂಗವಾಗಿಲ್ಲ ವಾಟ್ಸ್ಆ್ಯಪ್ ಇತ್ತೀಚೆಗಷ್ಟೆ ತನ್ನ ಬಹುನಿರೀಕ್ಷಿತ ಕಮ್ಯೂನಿಟಿ ಫೀಚರ್ಸ್ ಪರಿಚಯಿಸಿತ್ತು. ಆಂಡ್ರಾಯ್ಡ್, iOS ಮತ್ತು ವಾಟ್ಸ್ಆ್ಯಪ್ ವೆಬ್ ಬಳಕೆದಾರರಿಗೆ ಈ ನೂತನ ಫೀಚರ್ಸ್ ಲಭ್ಯವಾಗುತ್ತಿದೆ.
ಈ ಫೀಚರ್ ಅನ್ನು ಗ್ರೂಪ್‌ಗಳ ಗ್ರೂಪ್ ಎಂದು ಹೇಳಬಹುದು. ಅಂದರೆ ವಾಟ್ಸ್ಆ್ಯಪ್ನಲ್ಲಿ ಆಡ್ಮಿನ್‌ಗಳು ನಿರ್ದಿಷ್ಟ ಗುಂಪುಗಳಿಗೆ ಅಥವಾ ಇಡೀ ಸಮುದಾಯಕ್ಕೆ ವಿಚಾರವನ್ನು ಗುಂಪಿನ ಮೂಲಕ ಸಂದೇಶಗಳನ್ನು ಕಳುಹಿಸಲು ಸಾಧ್ಯವಾಗುತ್ತದೆ. ವಾಟ್ಸ್ಆ್ಯಪ್ ಕಮ್ಯೂನಿಟಿಗಳು ಜನರಿಗೆ ಕೆಲಸ ಮಾಡುವ ರಚನೆಯೊಂದಿಗೆ ಪ್ರತ್ಯೇಕ ಗುಂಪುಗಳನ್ನು ಒಂದೇ ಸೂರಿನಡಿಯಲ್ಲಿ ತರಲು ಅನುವು ಮಾಡಿಕೊಡುತ್ತದೆ.
ಇದೇ ರೀತಿಯಲ್ಲಿ ಕಮ್ಯೂನಿಟಿ ಕಳುಹಿಸುವ ಕಂಪ್ಲೀಟ್ ಅಪ್ಡೇಟ್‌ಗಳನ್ನು ಜನರು ಸ್ವೀಕರಿಸಬಹುದು. ಜೊತೆಗೆ ಕಮ್ಯೂನಿಟಿ ಗ್ರೂಪ್‌ನಲ್ಲಿ ಮುಖ್ಯವಾದವುಗಳ ಕುರಿತು ಸಣ್ಣ ಚರ್ಚಾ ಗುಂಪುಗಳನ್ನು ಸುಲಭವಾಗಿ ಸಂಘಟಿಸಬಹುದು.








