ಗದಗ: ಯುವಕನೊಬ್ಬ ಪ್ರೀತಿಸುವಂತೆ ಪೀಡಿಸಿದ್ದಕ್ಕೆ 15 ವರ್ಷದ ಅಪ್ರಾಪ್ತ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಬಣಗಾರ ಕಾಲೋನಿಯಲ್ಲಿ ನಡೆದಿದೆ. 9ನೇ ತರಗತಿ ಓದುತ್ತಿದ್ದ ಖುಷಿ ಆತ್ಮಹತ್ಯೆಗೆ ಶರಣಾಗಿರುವ ಅಪ್ರಾಪ್ತ ಬಾಲಕಿ. 18 ವರ್ಷದ ಮುತ್ತುರಾಜ್ ಮ್ಯಾಗೇರಿ ಹಾಗೂ 19 ವರ್ಷದ ಜುನೇದಸಾಬ್ ಕಂದಗಲ್ ಪ್ರೀತಿಸುವಂತೆ ಕಿರುಕುಳ ನೀಡಿದ್ದರಿಂದಾಗಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ.
ಈ ಇಬ್ಬರು ಯುವಕರು ಖುಷಿಯನ್ನು ಲವ್ ಮಾಡುತ್ತಿದ್ದರು. ಇಬ್ಬರಿಗೂ ಬಾಲಕಿಯ ಕುಟುಂಬಸ್ಥರು ತಾಕೀತು ಮಾಡಿದ್ದರು. ಆದರೆ, ಇಬ್ಬರು ಆಗಾಗ ಭೇಟಿಯಾಗಿ ಮಾತನಾಡಿ ಟಾರ್ಚರ್ ನೀಡುತ್ತಿದ್ದರು. ಈ ಟಾರ್ಚರ್‌ನಿಂದ ಬೇಸತ್ತು ಬಾಲಕಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾಳೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ವಿದ್ಯಾರ್ಥಿಗಳಾದ ಜಿನೇದಸಾಬ್ ಹಾಗೂ ಮುತ್ತುರಾಜ್ ವಿರುದ್ಧ ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.