ಬೆಂಗಳೂರು: ಕೊಲೆ ಪ್ರಕರಣದ (Renukaswamy Murder Case) ಆರೋಪಿ, ನಟ ದರ್ಶನ್ ಮತ್ತು ಗ್ಯಾಂಗ್ ಜಾಮೀನಿನ ಮೇಲೆ ಹೊರಗೆ ಬಂದಿದೆ. ಆದರೂ ಕೊಲೆ ಆರೋಪ ಹೊತ್ತಿರುವ ಗ್ಯಾಂಗ್ ಗೆ ಮಾತ್ರ ಸಂಕಷ್ಟ ತಪ್ಪುತ್ತಿಲ್ಲ.
ನಟ ದರ್ಶನ್‌ಗೆ (Darshan) ಹಾಗೂ 7 ಜನ ಆರೋಪಿಗಳ ಜಾಮೀನು ರದ್ದುಕೋರಿ ಸುಪ್ರೀಂಕೋರ್ಟ್‌ಗೆ (Supreme Court) ಪೊಲೀಸರು ಅರ್ಜಿ ಸಲ್ಲಿಕೆ ಮಾಡಿದ್ದಾರೆ. ವಕೀಲ ಅನಿಲ್ ನಿಶಾನಿ ಮುಖಾಂತರ ಮೇಲ್ಮನವಿ ಸಲ್ಲಿಸಿರುವ ಕರ್ನಾಟಕ ಸರ್ಕಾರ, 1,492 ಪುಟಗಳ ಕಡತ ಸಲ್ಲಿಸಿದೆ.
ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ದಾಖಲಾದ ಎಫ್‌ಐಆರ್ ಮತ್ತು ದೂರಿನ ಪ್ರತಿ, ಮರಣೋತ್ತರ ಪರೀಕ್ಷೆಯ ವರದಿ, ಆರೋಪಿಗಳ ಗ್ರೌಂಡ್ಸ್ ಆಫ್ ಅರೆಸ್ಟ್, ನ್ಯಾಯಾಲಯಕ್ಕೆ ಸಲ್ಲಿಸಿರುವ ಅಂತಿಮ ವರದಿಯ ತರ್ಜುಮೆ ಪ್ರತಿ. ಪ್ರತ್ಯಕ್ಷ ದರ್ಶಿಗಳ ಹೇಳಿಕೆಯ ತರ್ಜುಮೆ ಕಾಪಿ, ಮರಣೋತ್ತರ ಪರೀಕ್ಷೆಯ ವರದಿ, ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ, ಸಿಡಿಆರ್, ಪಂಚನಾಮೆ ವರದಿ, ಆರೋಪಿಗಳ ಬಳಿ ವಶಪಡಿಸಿಕೊಂಡ ಡಿಜಿಟಲ್ ವಸ್ತುಗಳ ವಿಶ್ಲೇಷಣೆ ವರದಿಗಳನ್ನು ಸಲ್ಲಿಕೆ ಮಾಡಲಾಗಿದೆ. ಹೀಗಾಗಿ ದರ್ಶನ್ ಮತ್ತು ಗ್ಯಾಂಗ್ ಗೆ ಮತ್ತೆ ಸಂಕಷ್ಟ ಶುರುವಾದಂತಾಗಿದೆ.








