ಬೆಂಗಳೂರು: ಹಿಂದು ಪದಕ್ಕೆ ಅಶ್ಲೀಲ ಎಂಬ ಅರ್ಥವಿದೆ (word Hindu means obscene) ಎಂದು ಹೇಳಿದ್ದ ಸಚಿವ ಸತೀಶ್ ಜಾರಕಿಹೊಳಿ (Satish Jarkiholi)ಗೆ ಸಂಕಷ್ಟ ಶುರುವಾಗಿದೆ.
ಈ ಕುರಿತು ಕ್ರಿಮಿನಲ್ ಮೊಕದ್ದಮೆ (Criminal Case) ದಾಖಲು ಮಾಡಲು ಜನಪ್ರತಿನಿಧಿಗಳ ನ್ಯಾಯಾಲಯ (Court of Representatives) ಒಪ್ಪಿಗೆ ನೀಡಿದೆ. ಚುನಾವಣೆಗೂ ಮುನ್ನ 2022ರ ನವೆಂಬರ್ 6ರಂದು ಬೆಳಗಾವಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ಅವರು, ಹಿಂದು ಹಾಗೂ ಹಿಂದುತ್ವದ ಪದದ ಬಗ್ಗೆ ಅವಹೇಳನಕಾರಿ ಮಾತುಗಳನ್ನು ಆಡಿದ್ದರು. ಹಿಂದು ಪದಕ್ಕೆ ಅಶ್ಲೀಲ ಎಂಬ ಅರ್ಥವಿದೆ ಎಂದಿದ್ದರು. ಈ ಹೇಳಿಕೆ ವಿರುದ್ಧ ಸಾಕಷ್ಟು ಆಕ್ರೋಶ ವ್ಯಕ್ತವಾಗಿದ್ದವು.
ಹೀಗಾಗಿ ಬಿಜೆಪಿ ನಾಯಕರು ರಾಜ್ಯದ ಹಲವು ಪ್ರದೇಶಗಳಲ್ಲಿ ದೂರು ನೀಡಿದ್ದರು. ವಕೀಲ ದಿಲೀಪ್ ಕುಮಾರ್ ಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ನ್ಯಾಯಾಲಯವು ಈಗ ಸತೀಶ್ ಜಾರಕಿಹೊಳಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಆದೇಶ ನೀಡಿದೆ.








