ಉಡುಪಿ: ವಿದ್ಯಾರ್ಥಿನಿಯನ್ನು ಪ್ರೀತಿಸಿ, ವಿವಾಹವಾಗುವಂತೆ ಒತ್ತಡ ಹಾಕಿ ಇಸ್ಲಾಂಗೆ ಮತಾಂತರವಾಗುವಂತೆ (Conversion) ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.
ಮಹಮ್ಮದ್ ಡ್ಯಾನಿಷ್ ಖಾನ್ (27) ಕಿರುಕುಳ ನೀಡಿ ಬಂಧಿಯಾಗಿರುವ ಆರೋಪಿ. ಈ ಆರೋಪಿ ವಿರುದ್ಧ ಮಣಿಪಾಲ ಕಾಲೇಜಿನ ವೈದ್ಯ ವಿದ್ಯಾರ್ಥಿಗಳು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ದೂರು ನೀಡಿರುವ ವಿದ್ಯಾರ್ಥಿನಿಯರು ಎಂಬಿಬಿಎಸ್ ಓದುವುದಕ್ಕಾಗಿ ದೆಹಲಿ ಹಾಗೂ ರಾಜಸ್ಥಾನದಿಂದ ಆಗಮಿಸಿದ್ದರು.
ಆರೋಪಿ ಡ್ಯಾನಿಷ್, ಯುವತಿಯನ್ನು ಪ್ರೀತಿಸಿದ್ದ ಎನ್ನಲಾಗಿದೆ. ಅಲ್ಲದೇ, ಮದುವೆಯಾಗುವ ಪ್ರಸ್ತಾಪ ಮುಂದಿಟ್ಟು,ಇಸ್ಲಾಂಗೆ ಮತಾಂತರವಾಗಬೇಕೆಂದು ಷರತ್ತು ವಿಧಿಸಿದ್ದ ಎನ್ನಲಾಗಿದೆ. ಷರತ್ತು ಒಪ್ಪದಿದ್ದಕ್ಕೆ ಬೆದರಿಕೆ, ಹಲ್ಲೆ, ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಉಡುಪಿ ಮಹಿಳಾ ಠಾಣೆಯಲ್ಲಿ ಆ.31 ರಂದು ಯುವತಿ ದೂರು ಸಲ್ಲಿಸಿದ್ದಾರೆ.
ಮಹಮ್ಮದ್ ಡ್ಯಾನಿಷ್ ಖಾನ್ ಮತ್ತು ಸಂತ್ರಸ್ತೆ ಒಂದೇ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ. ಇಬ್ಬರೂ ಒಂದೇ ಕ್ಯಾಂಪಸ್ ನಲ್ಲಿ ಪರಿಚಯವಾಗಿದ್ದರು. ಇಬ್ಬರ ಮಧ್ಯೆ ಸ್ನೇಹ ಬೆಳೆದು ಅದು ಪ್ರೀತಿಯಾಗಿ ತಿರುಗಿತ್ತು. ಆದರೆ, ಆತ ರಾಮಂದಿರದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾಗಿ ಯುವತಿ ಆರೋಪಿಸಿದ್ದಾರೆ.
2024 ರ ಮಾ.11 ರಂದು ಸಂತ್ರಸ್ತೆ ಆರೋಪಿಯ ರೂಮ್‌ಗೆ ತೆರಳಿದಾಗ ಮತಾಂತರಕ್ಕೆ ಒತ್ತಾಯಿಸಿದ್ದ. ನಿರಾಕರಿಸಿದಾಗ ಆರೋಪಿಯು ತನ್ನ ಕೆನ್ನೆಗೆ ಹೊಡೆದು, ಕೂದಲು ಹಿಡಿದು ಎಳೆದಾಡಿದ್ದಾನೆ. ದೇಹದ ಖಾಸಗಿ ಭಾಗವನ್ನು ಮುಟ್ಟಿ ಲೈಂಗಿಕ ಕುರುಕುಳ ನೀಡಿದ್ದಾನೆ ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು ಕೋರ್ಟ್ ಗೆ ಹಾಜರು ಪಡಿಸಿದ್ದಾರೆ. ಕೋರ್ಟ್ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿದೆ.








