“ಕೈ”ಗೆ ಭಜ್ಜಿ | ಸಿದ್ದು ಜೊತೆ ಹರ್ಭಜನ್ Harbhajan saaksha tv
ಟೀಮ್ ಇಂಡಿಯಾದ ಹಿರಿಯ ಸ್ಪಿನ್ನರ್ ಹರ್ಭಜನ್ ಸಿಂಗ್, ಇನ್ನೇನು ಕೆಲವೇ ದಿನಗಳಲ್ಲಿ ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿದ್ದ ಭಜ್ಜಿ, ನಾನು ಬಿಜೆಪಿ ಸೇರುವ ವದಂತಿ ಸುಳ್ಳು.. ನಾನು ಬಿಜೆಪಿ ಸೇರುವುದಿಲ್ಲ. ತಹ ವದಂತಿಗಳನ್ನ ದಯಮಾಡಿ ಗಂಭೀರವಾಗಿ ಪರಿಗಣಿಸಬೇಡಿ ಎಂದು ಮನವಿ ಮಾಡಿದ್ದರು.
ಆದ್ರೆ ಹರ್ಭಜನ್ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಅನ್ನೋ ಸುದ್ದಿ ಮುನ್ನಲೆಗೆ ಬಂದಿದೆ. ಇದಕ್ಕೆ ಪುಷ್ಠಿ ನೀಡುವಂತೆ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿದು ಸುಳಿವು ನೀಡಿದ್ದಾರೆ.
ನವಜೋತ್ ಸಿಂಗ್ ಸಿಧು ತಮ್ಮ ಟ್ವಿಟ್ಟರ್ ನಲ್ಲಿ ಹರ್ಭಜನ್ ಸಿಂಗ್ ಜೊತೆಗಿನ ಫೋಟೋವನ್ನು ಹೊಂಚಿಕೊಂಡಿದ್ದಾರೆ. ಅಲ್ಲದೇ ಹೀಗೆ ನಡೆಯುವ ಅವಕಾಶಗಳಿವೆ ಎಂದು ಕ್ಯಾಪ್ಷನ್ ಕೊಟ್ಟಿದ್ದಾರೆ. ಇದರೊಂದಿಗೆ ಭಜ್ಜಿ ರಾಜಕೀಯ ಪ್ರವೇಶ ವಿಷಯ ಮತ್ತೆ ಮುನ್ನೆಲೆಗೆ ಬಂದಿದೆ.
ಪಂಜಾಬ್ ಚುನಾವಣೆಗೂ ಮುನ್ನವೇ ಹರ್ಭಜನ್ ಕಾಂಗ್ರೆಸ್ ಸೇರಲಿದ್ದಾರೆ ಎಂದು ರಾಜಕೀಯ ಪಂಡಿತರು ವಿಶ್ಲೇಷಿಸುತ್ತಿದ್ದಾರೆ. ಆದ್ರೆ ಇದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಥವಾ ಹರ್ಭಜನ್ ಸಿಂಗ್ ರಿಂದ ಇದುವರೆಗೆ ಯಾವುದೇ ಅಧಿಕೃತ ಪ್ರಕಟಣೆ ಪ್ರಕಟವಾಗಿಲ್ಲ.
ಅಂದಹಾಗೆ ಪಂಜಾಬ್ ವಿಧಾನಸಭಾ ಚುನಾವಣೆಗೂ ಮುನ್ನ ಮತದಾರರನ್ನು ಸೆಳೆಯಲು ರಾಜಕೀಯ ಪಕ್ಷಗಳು ಮುಂದಾಗಿವೆ. ಈ ಪಟ್ಟಿಯಲ್ಲಿ ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗರಾದ ಯುವರಾಜ್ ಸಿಂಗ್ ಮತ್ತು ಹರ್ಭಜನ್ ಸಿಂಗ್ ಇದ್ದಾರೆ ಎಂದು ವರದಿಯೊಂದು ತಿಳಿಸಿದೆ. ಇವರು ಒಪ್ಪಿದರೆ ಟಿಕೆಟ್ ನೀಡುವ ಯೋಚನೆಯೂ ರಾಜಕೀಯ ಪಾರ್ಟಿಗಳಿಗೆ ಇದೆಯಂತೆ.
ಅದರ ಭಾಗವಾಗಿಯೇ ಹರ್ಭಜನ್ ಸಿಂಗ್ ಬಿಜೆಪಿ ಸೇರಲಿದ್ದಾರೆ ಅನ್ನೋ ವಿಷಯ ಮುನ್ನಲೆಗೆ ಬಂದಿತ್ತು. ಇದಕ್ಕೆ ಭಜ್ಜಿ ಸ್ಪಷ್ಟನೆ ನೀಡಿದ್ರೂ ಇದೀಗ ಸಿದ್ದು ಜೊತೆಗಿನ ಫೋಟೋ ಹರ್ಭಜನ್ ರಾಜಕೀಯ ರಂಗ ಪ್ರವೇಶಕ್ಕೆ ವೇದಿಕೆ ಸಜ್ಜಾಗಿದೆ ಎನ್ನೋ ಸುಳಿವನ್ನ ನೀಡಿದೆ.