Hardhik pandya | ಟೀಂ ಇಂಡಿಯಾಗೆ ಹಾರ್ದಿಕ್ ಪಾಂಡ್ಯ ಕಂ ಬ್ಯಾಕ್ ಪಕ್ಕಾ..
ಟೀಂ ಇಂಡಿಯಾ ಸ್ಟಾರ್ ಆಲ್ ರೌಂಡರ್, ಗುಜರಾತ್ ಟೈಟಾನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಸಂಪೂರ್ಣ ಫಿಟ್ನೆಸ್ ಸಾಧಿಸಿದ್ದಾರೆ.
ಐಪಿಎಲ್-2022 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಬೌಲಿಂಗ್ ಮಾಡಿದ್ದಾರೆ.
ಈ ಪಂದ್ಯದಲ್ಲಿ ಪಾಂಡ್ಯ ತಮ್ಮ ನಾಲ್ಕು ಓವರ್‌ಗಳ ಕೋಟಾವನ್ನು ಪೂರ್ಣಗೊಳಿಸಿದರು. ಪಾಂಡ್ಯ 4 ಓವರ್ ಬೌಲ್ ಮಾಡಿ 37 ರನ್ ನೀಡಿದರು.
ಆದರೆ, ಬ್ಯಾಟಿಂಗ್ ನಲ್ಲಿ ಅತ್ಯುತ್ತಮ ಹೊಡೆತಗಳನ್ನು ಬಾರಿಸಿ ರಂಜಿಸಿದರು. ಈ ಪಂದ್ಯದಲ್ಲಿ ಪಾಂಡ್ಯ 27 ಎಸೆತಗಳಲ್ಲಿ 33 ರನ್ ಗಳಿಸಿದರು.
ಅವರ ಇನ್ನಿಂಗ್ಸ್‌ನಲ್ಲಿ ಐದು ಬೌಂಡರಿ ಮತ್ತು ಒಂದು ಸಿಕ್ಸರ್ ಇದೆ. ಈ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಗೆ ಭಾರತ ತಂಡದಲ್ಲಿ ಪಾಂಡ್ಯ ಸ್ಥಾನ ಪಡೆಯುವುದು ಖಚಿತ ಎಂದು ಟೀಂ ಇಂಡಿಯಾದ ಮಾಜಿ ಮುಖ್ಯ ಕೋಚ್ ರವಿಶಾಸ್ತ್ರಿ ಅಭಿಪ್ರಾಯಪಟ್ಟಿದ್ದಾರೆ.
ಹಾರ್ದಿಕ್ ಪಾಂಡ್ಯ ಫುಲ್ ಫಿಟ್ ಆಗಿದ್ದಾರೆ. ಅವರು ಫಿಟ್ನೆಸ್ ಸಾಧಿಸಲು ತುಂಬಾ ಶ್ರಮಿಸಿದ್ದಾರೆ.
ಹಾರ್ದಿಕ್ ಫಿಟ್ ನೆಸ್ ಸಾಧಿಸಿರೋದು ಭಾರತಕ್ಕೆ ಪ್ಲಸ್ ಪಾಯಿಂಟ್ ಆಗಿದೆ. ಹಾರ್ದಿಕ್ ನಂತಹ ಆಟಗಾರ ಸಂಪೂರ್ಣ ಫಿಟ್ ನೆಸ್ ನಲ್ಲಿದ್ದಾಗ ಹೆಚ್ಚು ಆಕ್ರಮಣಕಾರಿಯಾಗಿ ಆಡುತ್ತಾರೆ.
ಅದೇ ರೀತಿ ಹಾರ್ದಿಕ್ ಪಾಂಡ್ಯ ಅತ್ಯುತ್ತಮ ಬ್ಯಾಟಿಂಗ್ ಕೌಶಲ್ಯವನ್ನು ಹೊಂದಿದ್ದಾರೆ. ಅವರು ಮ್ಯಾಚ್ ವಿನ್ನರ್, ಅತ್ಯುತ್ತಮ ಫೀಲ್ಡರ್.
ಇದೇ ಫಿಟ್ನೆಸ್ ಕಾಯ್ದುಕೊಂಡರೆ ಈ ವರ್ಷದ ಅಕ್ಟೋಬರ್‌ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗೆ ಭಾರತ ತಂಡದಲ್ಲಿ ಸ್ಥಾನ ಪಡೆಯುವುದು ಖಚಿತ ಎಂದು ರವಿಶಾಸ್ತ್ರಿ ಹೇಳಿದ್ದಾರೆ. Hardik-pandya-fully-fit-he-walks-teamindia