ಸಿಎಂ ಸಿದ್ದರಾಮಯ್ಯ ವಿರುದ್ಧ ಪದೇ ಪದೇ ವಾಗ್ದಾಳಿ ನಡೆಸಿ ಸರ್ಕಾರ ಹಾಗೂ ಪಕ್ಷಕ್ಕೆ ಮುಜುಗರ ತರುತ್ತಿರುವ ಕಾಂಗ್ರೆಸ್ ನ ಹಿರಿಯ ನಾಯಕ, ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರ ಮನವೊಲಿಸುವ ಕಾರ್ಯ ನಡೆಯುತ್ತಿದೆ.
ನಗರದಲ್ಲಿ ಅವರನ್ನು ಭೇಟಿ ಮಾಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮತ್ತು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮನವೊಲಿಸುವ ಯತ್ನ ಮಾಡಿದ್ದಾರೆ. ಅತಿ ಹಿಂದುಳಿದ ವರ್ಗಗಳ ಸಮಾವೇಶವನ್ನು ರಾಜ್ಯಾದ್ಯಂತ ನಡೆಸುವ ಸಿದ್ಧತೆ ನಡೆಸಿದ್ದರು ಎನ್ನಲಾದ ಹರಿಪ್ರಸಾದ್ ಅವರಿಗೆ ಈ ಯತ್ನ ಕೈ ಬಿಡುವಂತೆ ಮನವಿ ಮಾಡಲಾಗಿದೆ.
ಮಾಜಿ ಸಚಿವ ದಿ. ಶ್ರೀರಾಮುಲು ಅವರ ಪುತ್ರ ಶ್ರೀನಾಥ್ ನೇತೃತ್ವದಲ್ಲಿ ರಾಜ್ಯಾದ್ಯಂತ ಹಿಂದುಳಿದವರ ಸಮಾವೇಶ ನಡೆಸುವ ಸಿದ್ಧತೆ ನಡೆಸಿದ್ದರು ಎನ್ನಲಾಗಿದೆ. ಈ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಸವಾಲು ಒಡ್ಡುವ ಯತ್ನ ಈ ಮೂಲಕ ನಡೆಯುತಿತ್ತು ಎನ್ನಲಾಗಿದೆ. ಹೀಗಾಗಿ ಹೈಕಮಾಂಡ್ ನಾಯಕರು ಲೋಕಸಭಾ ಚುನಾವಣೆ ಸಾಮೀಪ್ಯದ ಈ ಹಂತದಲ್ಲಿ ಇಂತಹ ಸಮಾವೇಶ ನಡೆಸುವುದರಿಂದ ಪಕ್ಷ ಹಾಗೂ ಸರ್ಕಾರ ಎರಡಕ್ಕೂ ಹಿನ್ನೆಡೆಯಾಗಲಿದೆ ಎಂಬ ನಿಟ್ಟಿನಲ್ಲಿ ಸಮಾವೇಶ ಕೈ ಬಿಡಲು ಮನವೊಲಿಸಿ ಎಂದು ಸೂಚಿಸಿತ್ತು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಉಭಯ ನಾಯಕರು ಹರಿಪ್ರಸಾದ್ ಅವರನ್ನು ಭೇಟಿ ಮಾಡಿ ಸುದೀರ್ಘವಾಗಿ ಚರ್ಚಿಸಿದರು.