Harish Poonja | ಶಾಸಕ ಹರೀಶ್ ಪೂಂಜಾ ಕಾರ್ ಅಡ್ಡಗಟ್ಟಿದ ದುಷ್ಕರ್ಮಿಗಳು
ಮಂಗಳೂರು : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಕಾರ್ ಅಡ್ಡಗಟ್ಟಿ ಬೆದರಿಕೆ ಹಾಕಿದ್ದಾರೆ ಎಂದು ವರದಿಯಾಗಿದೆ.
ಮಂಗಳೂರಿನ ಹೊರವಲಯದ ಫರಂಗಿಪೇಟೆಯಲ್ಲಿ ನಿನ್ನೆ ರಾತ್ರಿ 11.30ರ ವೇಳೆಗೆ ಘಟನೆ ನಡೆದಿದೆ.
ಹರೀಶ್ ಪೂಂಜಾ ಅವರು ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿ ಬೆಳ್ತಂಗಡಿಗೆ ತೆರಳುತ್ತಿದ್ದರು.
ಈ ವೇಳೆ ಕೆಲ ದುಷ್ಕರ್ಮಿಗಳು ಶಾಸಕರ ಕಾರನ್ನು ಅಡ್ಡ ಹಾಕಿದ್ದಾರೆ.

ಆದ್ರೆ ಹರೀಶ್ ಪೂಂಜಾ ಅವರು ಶಾಸಕರ ಅಧಿಕೃತ ಕಾರನ್ನ ಬಿಟ್ಟು ಸಂಬಂಧಿಯೋರ್ವರ ಕಾರಿನಲ್ಲಿ ತೆರಳುತ್ತಿದ್ದರು.
ಹರೀಶ್ ಪೂಂಜಾ ಅವರ ಅಧಿಕೃತ ವಾಹನ ಚಾಲಕ ಶಾಸಕರ ಕಾರನ್ನು ಚಲಾಯಿಸುತ್ತಿದ್ದರು.
ಆ ಕಾರನ್ನು ಅಡ್ಡಗಟ್ಟಿದ್ದ ದುಷ್ಕರ್ಮಿಗಳು ಅವಾಚ್ಯವಾಗಿ ಬೈದು ತಲವಾರು ಝಳಪಿಸಿ ಪರಾರಿಯಾಗಿದ್ದಾರೆ.
ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಶಾಸಕರ ಕಾರು ಚಾಲಕ ನವೀನ್ ದೂರು ನೀಡಿದ್ದಾರೆ.
ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








