6 ವರ್ಷಗಳಿಂದ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನ ಆರಂಭಿಸಿದ್ದ ಭಾರತೀಯ ಆಟಗಾರ್ತಿ ಹರ್ಲೀನ್ ಡಿಯೋಲ್ ಚೊಚ್ಚಲ ಶತಕ ಸಿಡಿಸಿ ಮಿಂಚಿದದಾರೆ.
ಇಲ್ಲಿಯವರೆಗೆ ಸಿಕ್ಕ ಅವಕಾಶಗಳನ್ನು ಬಳಸಿಕೊಳ್ಳಲು ವಿಫಲರಾಗಿದ್ದ ಹರ್ಲೀನ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡಿರುವ ಹರ್ಲೀನ್, ಸರಣಿಯ ಎರಡನೇ ಪಂದ್ಯದಲ್ಲಿ ತಮ್ಮ ಅಂತರಾಷ್ಟ್ರೀಯ ವೃತ್ತಿಜೀವನದ ಮೊದಲ ಏಕದಿನ ಶತಕ ಸಿಡಿಸಿ ಮಿಂಚಿದ್ದಾರೆ.
ಭಾರತ ಮಹಿಳಾ ತಂಡ ಮತ್ತು ವೆಸ್ಟ್ ಇಂಡೀಸ್ ಮಹಿಳಾ ತಂಡಗಳ ನಡುವೆ 3 ಪಂದ್ಯಗಳ ಏಕದಿನ ಸರಣಿ ನಡೆಯುತ್ತಿದೆ. ಸರಣಿಯ ಎರಡನೇ ಪಂದ್ಯದಲ್ಲಿ ಹರ್ಲೀನ್ ಡಿಯೋಲ್ 115 ರನ್ ಗಳ ಸ್ಫೋಟಕ ಇನ್ನಿಂಗ್ಸ್ ಆಡಿದ್ದಾರೆ. 2019 ರಿಂದಲೂ ಭಾರತ ತಂಡದ ಭಾಗವಾಗಿದ್ದ ಹರ್ಲೀನ್ ಡಿಯೋಲ್ ಗೆ ಇದು ಚೊಚ್ಚಲ ಶತಕವಾಗಿದೆ.
ಡಿಯೋಲ್ 103 ಎಸೆತಗಳಲ್ಲಿ 115 ರನ್ ಸಿಡಿಸಿ ಮಿಂಚಿದ್ದಾರೆ. ಇವುಗಳಲ್ಲಿ 16 ಬೌಂಡರಿಗಳು ಸೇರಿವೆ.
ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಪ್ರಕಟ; ಭಾರತ ತಂಡದ ಪೈಪೋಟಿ ಯಾವಾಗ?
ಐಸಿಸಿಯು ಇಂದು 2025 ರ ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಪ್ರಕಟಿಸಿದೆ. ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ಹೈಬ್ರಿಡ್ ಮಾದರಿಯಲ್ಲಿ ನಡೆಯಲಿದೆ. ಪಾಕಿಸ್ತಾನ್ ಆತಿಥ್ಯದಲ್ಲಿ ಟೂರ್ನಿ ನಡೆದರೂ ಭಾರತ...