ಬಸ್ ನಲ್ಲಿ ದೈಹಿಕ ಕಿರುಕುಳ : ಆರೋಪಿ ಅಂದರ್, ಪೊಲೀಸರೆದುರೇ ಕಾಮುಕನಿಗೆ ಕಪಾಳ ಮೋಕ್ಷ ಮಾಡಿದ ಯುವತಿ..!
ಮಂಗಳೂರು: ಬಸ್ ನಲ್ಲಿ ಕುಳಿತಿದ್ದ ಯುವತಿಗೆ ವ್ಯಕ್ತಿಯೋರ್ವ ದೈಹಿಕವಾಗಿ ಕಿರುಕುಳ ನೀಡಿದ್ದಲ್ಲದೇ ವಿಡಿಯೋ ಮಾಡಿ ಹರಿಬಿಡುವುದಾಗಿಯೂ ಧಮ್ಕಿ ಹಾಕಿರುವ ಪ್ರಕರಣ ಬೆಳಕಿಗೆ ಬಂದಿದೆ. ವ್ಯಕ್ತಿಯೋರ್ವ ಕಿರುಕುಳ ನೀಡಿದ ಬಗ್ಗೆ ಯುವತಿಯೊಬ್ಬರು ಇನ್ಸ್ಟಾಗ್ರಾಮ್ ಪೋಸ್ಟ್ ಹಾಕಿದ್ದು ಮಂಗಳೂರಿನಲ್ಲಿ ಕೆಲ ದಿನಗಳ ಹಿಂದೆ ವೈರಲ್ ಆಗಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಅಲ್ಲದೇ ಆರೋಪಿ ಬಂಧನವಾಗ್ತಿದ್ದಂತೆ ಪೊಲೀಸ್ ಠಾಣೆಗೆ ಬಂದ ಯುವತಿ ಪೊಲೀಸರ ಎದುರೇ ಕಾಮುಕನಿಗೆ ಕಪಾಳಮೋಕ್ಷ ಮಾಡಿದ್ದಾಳೆ.
ಶಾಕಿಂಗ್ : ‘ಕೊರೊನಾʼ ವೈರಸ್ ನಿಂದ ಮೆದುಳಿಗೂ ಹಾನಿ..!
41 ವರ್ಷದ ಕಾಸರಗೋಡು ನಿವಾಸಿ ಹುಸೇನ್ ಬಂಧಿತ ಆರೋಪಿಯಾಗಿದ್ದಾನೆ. ಈತ ಜನವರಿ 14 ರಂದು ಯುವತಿ ದೇರಳಕಟ್ಟೆಯಲ್ಲಿ ಖಾಸಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದಾಗ, ಆಕೆಯ ಪಕ್ಕದ ಸೀಟ್ ನಲ್ಲಿ ಕುಳಿತಿದ್ದ. ಆಕೆಗೆ ಕಿರುಕುಳ ನೀಡಿದ್ದ. ಪಕ್ಕದಲ್ಲಿ ಕುಳಿತು ಆರೋಪಿ ಹುಸೇನ್ ಯುವತಿಗೆ ದೈಹಿಕ ಕಿರುಕುಳ ನೀಡಿದ್ದ. ಇದಕ್ಕೆ ಯುವತಿ ವಿರೋಧ ವ್ಯಕ್ತಪಡಿಸಿದ ಮೇಲೆ ಬಸ್ ನಿಂದ ಇಳಿದಿದ್ದ. ನಂತರ ಮತ್ತೊಂದು ಬಸ್ ನಲ್ಲಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಮತ್ತೆ ಕಿರುಕುಳ ನೀಡಿದ್ದ. ಈ ವೇಳೆ ಫೋಟೋ ತೆಗೆದು ವೈರಲ್ ಮಾಡೋದಾಗಿ ಯುವತಿ ಎಚ್ಚರಿಸಿದ್ದರೂ ಆತ ಕೇರ್ ಮಾಡಿರಲಿಲ್ಲ ಎಂದು ಯುವತಿ ಇನ್ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಳು.
ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿದ ಕಾಮುಕ ಶಿಕ್ಷಕನಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್..!
ಕೆಲವೇ ಗಂಟೆಯಲ್ಲಿ ಯುವತಿಯ ಪೋಸ್ಟ್ ವೈರಲ್ ಆಗಿತ್ತು. ಫೋಸ್ಟ್ ಆಧಾರದಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಯುವತಿಯ ದಿಟ್ಟ ಕ್ರಮಕ್ಕೆ ಮಂಗಳೂರು ಕಮೀಷನರ್ ಶಶಿಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಠಾಣೆಗೆ ಕರೆಸಿ ಸನ್ಮಾನ ಮಾಡಿದ್ದಾರೆ. ಇತ್ತ ಪ್ರಕರಣ ಸಂಬಂಧ ಬಸ್ ಡ್ರೈವರ್ ಮತ್ತು ನಿರ್ವಾಹಕನಿಗೆ ಸಮನ್ಸ್ ನೀಡಿರುವ ಪೊಲಿಸರು ವಿಚಾರಣೆಗೆ ಒಳಪಡಿಸಿದ್ದಾರೆ.
ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಿಸಿದ ಬಾಲಕಿಯ ವಿರುದ್ಧವೇ ಕೇಸ್ ದಾಖಲಿಸಿದ ಪೊಲೀಸರು – ಕಾರಣ..!
ಇನ್ನೂ ಈ ಬಗ್ಗೆ ಮಾತನಾಡಿರೋ ಯುವತಿ ನಾನು ವಿರೋಧ ವ್ಯಕ್ತಪಡಿಸಿದರೂ ಯಾರೂ ಸ್ಪಂದಿಸಿರಲಿಲ್ಲ. ಬಸ್ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸುರಕ್ಷತೆಯ ಬಗ್ಗೆ ಸ್ಪಂದಿಸಬೇಕು. ಇಂತಹ ಸಂದರ್ಭಗಳಲ್ಲಿ ಬಸ್ ಚಾಲಕರು, ನಿರ್ವಾಹಕರು ಹಾಗೂ ಸಾರ್ವಜನಿಕರು ನೊಂದವರಿಗೆ ನೆರವು ನೀಡಬೇಕು ಎಂದು ಮನವಿ ಮಾಡಿದರು. ಪ್ರಕರಣ ಭೇದಿಸಿದ ತಂಡಕ್ಕೆ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ 10 ಸಾವಿರ ರೂಪಾಯಿ ಬಹುಮಾನ ನೀಡಿದರು. ಯುವತಿಯನ್ನು ಸನ್ಮಾನಿಸಿದರು.
ತಂದೆಗೆ ಊಟ ಕೊಡಲು ತೆರಳಿದ್ದ ಬಾಲಕಿ ಮೇಲೆ ಅತ್ಯಚಾರ, ಕೊಲೆ : ಘಟನೆಯಲ್ಲಿ 4 ವರ್ಷದ ಮಗು ಸಾವು
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








