ಹರ್ಷ ಕೊಲೆ ಪ್ರಕರಣ | ಇಬ್ಬರು ಆರೋಪಿಗಳ ಬಂಧನ Saaksha Tv
ಶಿವಮೊಗ್ಗ: ಭಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ ಸಂಭಂದ, ಇಬ್ಬರು ಆರೋಪಿಗಳನ್ನು ಪೊಲೀಸರು ಅರೇಸ್ಟ್ ಮಾಡಿದ್ದಾರೆ.
ಶಿವಮೊಗ್ಗದ ಬುದ್ಧನಗರ ನಿವಾಸಿ ಕಾಸಿಫ್ ( 30), ಜೆ.ಪಿ ನಗರ ನಿವಾಸಿ ಸೈಯದ್ ನದೀಮ್ (20), ಬಂಧಿತ ಆರೋಪಿಗಳು. ಕಾಸಿಫ್ ಲಾರಿ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ದು, ಸೈಯದ್ ನದೀಮ್ ಟೈಲ್ಸ್ ಕೆಲಸ ಮಾಡುತ್ತಿದ್ದನು. ಈ ಕುರಿತು ಶಿವಮೊಗ್ಗದಲ್ಲಿ ಸುದ್ದಿಗಾರರಿಗೆ ನೀಡಿದ ಶಿವಮೊಗ್ಗ ಎಡಿಜಿಪಿ ಎಸ್ ಮುರುಗನ್ , ನಗರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಲು ಬಿಡುವುದಿಲ್ಲ, ಶಾಂತಿ ಕಾಪಾಡಲು ಪೊಲೀಸರು ಬೆಳಗ್ಗೆಯಿಂದ ಎಲ್ಲಾ ಕ್ರಮ ಕೈಗೊಳ್ಳುತ್ತಿದ್ದೇವೆ. ಖುದ್ದು ನಾನೇ ರಸ್ತೆಗಳಿದು ಪರಿಶೀಲನೆ ಮಾಡುತ್ತಿದ್ದೇನೆ. ಶಾಂತಿ ಕಾಪಾಡಲು ಜನರು ಸಹಕರಿಸಬೇಕೆಂದು ಮನವಿ ಮಾಡಿದ್ದಾರೆ.
ಪ್ರಕರಣ ತನಿಖಾ ಹಂತದಲ್ಲಿರುವುದರಿಂದ ಹೆಚ್ಚಿನ ಮಾಹಿತಿ ನೀಡಲಾಗುವುದಿಲ್ಲ. ಇಬ್ಬರನ್ನು ಬಂಧಿಸಿದ್ದು ಇನ್ನುಳಿದವರಿಗಾಗಿ ಬಲೆ ಬೀಸಿದ್ದು, ಶೀಘ್ರವೇ ಬಂಧಿಸುತ್ತೇವೆ ಎಂದರು.
ಅಲ್ಲದೇ ಶಿವಮೊಗ್ಗ ನಗರದಾದ್ಯಂತ ನಾಳೆ ಬೆಳಗ್ಗೆ 6 ಗಂಟೆವರೆಗೂ ಸೆಕ್ಷನ್ 144 ಜಾರಿ ಮಾಡಲಾಗಿದೆ. ಮುನ್ನೆಚ್ಚರಿಕೆಗಾಗಿ ಶಾಲೆ-ಕಾಲೇಜಿಗೂ ರಜೆ ಘೋಷಣೆ ಮಾಡಲಾಗಿದೆ. ಶಿವಮೊಗ್ಗದಲ್ಲಿ ನಿನ್ನೆ ರಾತ್ರಿಯಿಂದ ನಾಳೆ ಮುಂಜಾನೆ 6 ಗಂಟೆಯವರೆಗೆ ಕಫ್ರ್ಯೂ ಜಾರಿ ಮಾಡಲಾಗಿದೆ. ಪರಿಸ್ಥಿತಿ ನಿಯಂತ್ರಿಸಲು ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ಕರ್ಫ್ಯೂ ಜಾರಿ ನಡುವೆಯೂ ಮನೆ ಮುಂದೆ ನಿಲ್ಲಿಸಿದ್ದ ಒಂದು ಆಟೋ ಹಾಗು ಒಂದು ಬೈಕ್ ಗೆ ಬೆಂಕಿ ಹಚ್ಚಿದ ಘಟನೆ ಶಿವಮೊಗ್ಗದ ತುಂಗಾನಗರದಲ್ಲಿ ನಡೆದಿದೆ.










