T20 | ಹರ್ಷಲ್ ಪಟೇಲ್ ಗೆ ಗಾಯ… ದಕ್ಷಿಣ ಆಫ್ರಿಕಾ ಟಿ 20 ಸಿರೀಸ್ ಗೆ ದೂರ
ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೂ ಮುನ್ನ ಟೀಂ ಇಂಡಿಯಾಗೆ ಭಾರೀ ಆಘಾತ ಎದುರಾಗುವ ಸಾಧ್ಯತೆ ಇದೆ.
ಭಾರತದ ಯುವ ವೇಗಿ ಹರ್ಷಲ್ ಪಟೇಲ್ ಗಾಯದ ಸಮಸ್ಯೆಯಿಂದಾಗಿ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಿಂದ ಹೊರಗುಳಿಯುವ ಸಾಧ್ಯತೆ ಇದೆ.
ಐಪಿಎಲ್- 2022ರ ಅಂಗವಾಗಿ ಗುರುವಾರ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಹರ್ಷಲ್ ಪಟೇಲ್ ಕೈಗೆ ಗಾಯ ಮಾಡಿಕೊಂಡಿದ್ದಾರೆ.
ಹೀಗಾಗಿ ಹರ್ಷಲ್ ಪಟೇಲ್ ಪಂದ್ಯದಲ್ಲಿ ಕೇವಲ ಒಂದು ಓವರ್ ಬೌಲ್ ಮಾಡಿದರು.
ಬಿಸಿಸಿಐ ಮೇ 25 ರಂದು ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಿದೆ. ಆದರೆ, ಟೀಂ ಇಂಡಿಯಾ ಇನ್ನೂ ಗಾಯದ ಸಮಸ್ಯೆಯಿಂದ ಬಳಲುತ್ತಿದೆ.
ಸ್ಟಾರ್ ವೇಗಿ ದೀಪಕ್ ಚಹಾರ್ ಗಾಯದ ಸಮಸ್ಯೆಯಿಂದ ಈ ವರ್ಷ ಐಪಿಎಲ್ ನಿಂದ ಹೊರಗುಳಿದಿದ್ದಾರೆ.
ಸೂರ್ಯಕುಮಾರ್ ಯಾದವ್ ಮತ್ತು ಜಡೇಜಾ ಟೂರ್ನಿಯಿಂದ ಹೊರಗುಳಿದಿದ್ದಾರೆ.
ಹೀಗಾಗಿ ದಕ್ಷಿಣ ಆಫ್ರಿಕಾದ ಸರಣಿಗೆ ಮೂವರ ಲಭ್ಯತೆಯೂ ಅನುಮಾನವಾಗಿದೆ. ಸರಣಿಯ ಮೊದಲ ಟಿ20 ಪಂದ್ಯ ಜೂನ್ 9 ರಂದು ದೆಹಲಿಯಲ್ಲಿ ನಡೆಯಲಿದೆ. harshal-patel-likely-miss-south-africa-series-injury