ಹರ್ಷ್ಯ ಕೊಲೆ ಆರೋಪಿಗಳು ಬೆಂಗಳೂರು ಪರಪ್ಪನ ಅಗ್ರಹಾರಕ್ಕೆ ಶಿಫ್ಟ್
ಶಿವಮೊಗ್ಗ: ಬಂಜರಗದಳ ಹರ್ಷ ಕೊಲೆ ಪ್ರಕರಣಕ್ಕೆ ಸಂಭಂದಿಸಿದ್ದಂತೆ ತನಿಕೆ ಚುರುಕುಗೊಂಡಿದ್ದು, ಆರೋಪಿಗಳನ್ನು ಶೀಘ್ರವೇ ಬೆಂಗಳೂರು ಜೈಲಿಗೆ ಶಿಫ್ಟ್ ಮಾಡುವ ಸಾಧ್ಯತೆಯಿದೆ.
ಈ ಪ್ರಕರಣವು ಯುಎಪಿಎ ಆ್ಯಕ್ಟ್ ಅಳವಡಿಕೆಯಾದ ಹಿನ್ನೆಲೆಯಲ್ಲಿ ಪ್ರಕರಣವನ್ನು ಎನ್ಐಎಗೆ ಶಿಫ್ಟ್ ಮಾಡಲಾಗಿದ್ದು, ಈಗಾಗಲೇ ತನಿಖೆಯ ಪ್ರಥಮ ಹಂತವೂ ಆರಂಭಗೊಂಡಿದೆ. ಹಾಗೇ ಎನ್ಐಎ ವಿಶೇಷ ನ್ಯಾಯಾಲಯದ ಮೂಲಕ ಪ್ರಕರಣದ ಆರೋಪಿಗಳನ್ನು ಬೆಂಗಳೂರು ಜೈಲಿಗೆ ಸ್ಥಳಾಂತರ ಮಾಡಿಸಿಕೊಳ್ಳಲಾಗುತ್ತಿದೆ.
ಕೊಲೆ ಆರೋಪಿಗಳ ಪೈಕಿ ಮೂರು ಜನ ಮೈಸೂರು, ನಾಲ್ವರು ಬಳ್ಳಾರಿ, ಉಳಿದ ಮೂವರನ್ನು ಬೆಳಗಾವಿ ಜೈಲಿಗೆ ಶಿಫ್ಟ್ ಮಾಡಲು ಶಿವಮೊಗ್ಗ ಕೇಂದ್ರ ಕಾರಾಗೃಹ ತೀರ್ಮಾನಿಸಿತ್ತು. ಪ್ರಕರಣದ ತನಿಖೆಯನ್ನು ಎನ್ಐಎ ಆರಂಭಿಸಿರುವುದರಿಂದ ಇದೀಗ ಎಲ್ಲಾ ಆರೋಪಿಗಳು ಬೆಂಗಳೂರಿನ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಆಗಲಿದ್ದಾರೆ. ಈ ವರ್ಗಾವಣೆ ಪ್ರಕ್ರಿಯೆ ಮುಗಿದ ಬಳಿಕ ಎನ್ಐಎ ವಿಚಾರಣೆ ನಡೆಸಲಿದೆ.