ನೆಚ್ಚಿನ ಬೈಕ್ ಮಾರಿದ ಹಣದಲ್ಲಿ ಆಕ್ಸಿಜನ್ ಸಾಂದ್ರಕ ದಾನ ಮಾಡಿದ ನಟ ಹರ್ಷವರ್ಧನ್ ರಾಣೆ
ದೇಶ ಹಾಗೂ ರಾಜ್ಯ ಅದ್ರಲ್ಲೂ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ..
ಈ ನಡುವೆ ಸ್ಯಾಂಡಲ್ ವುಡ್ , ಬಾಲಿವುಡ್ , ಟಾಲಿವುಡ್ , ಕಾಲಿವುಡ್ ನ ಅನೇಕ ಸಿನಿಮಾ ತಾರೆಯರು ಬಡವರಿಗೆ , ಕೋವಿಡ್ ಸೋಂಕಿತರಿಗೆ ತಮಗೆ ತೋಚಿದ ಸಹಾಯಗಳನ್ನ ಮಾಡುತ್ತಿದ್ದಾರೆ. ಕಿಚ್ಚ ಸುದೀಪ್ , ಶ್ರೀಮುರುಳಿ, ರಾಗಿಣಿ, ಅಕ್ಷಯ್ ಕುಮಾರ್ , ಸಲ್ಮಾನ್ ಖಾನ್ , ಸೋನು ಸೂದ್ , ಹೀಗೆ ಹಲವರು ಕಷ್ಟದ ಸಂದರ್ಭದಲ್ಲಿ ಸಹಾಯಾಸ್ತ ಚಾಚಿದ್ದಾರೆ.
ಮತ್ತೊಂದೆಡೆ ಅನೇಕ ಸೆಲೆಬ್ರಿಟಿಗಳು ಜೀವ ಕಳೆದುಕೊಂಡಿದ್ದಾರೆ.. ಇನ್ನೂ ಹಲವರು ತಮ್ಮರನ್ನ ಕಳೆದುಕೊಂಡ ದೂಃಖದಲ್ಲಿದ್ದಾರೆ. ಇನ್ನೂ ಅನೇಕರು ಆಗಾಗ ಸಾಮಾಜಿಕ ಜಾಲತಾಣಗಳ ಮೂಲಕ ಜನರಿಗೆ ಜಾಗೃತಿ ಮೂಡಿಸುವ ಪ್ರಯತ್ನದಲ್ಲಿದ್ದಾರೆ.
ಇಂತಹ ಸಂಕಷ್ಟದಲ್ಲಿ ಖ್ಯಾತ ನಟ ಹರ್ಷವರ್ಧನ್ ರಾಣೆ ಜನರ ಸಹಾಯಕ್ಕೆ ನಿಂತಿದ್ದಾರೆ. ಆಮ್ಲಜನಕ ಕೊರತೆ ನೀಗಿಸಲು ಹರ್ಷವರ್ಧನ್ ತನ್ನ ಪ್ರೀತಿಯ ಬೈಕ್ ಅನ್ನೇ ಮಾರಾಟಕ್ಕೆ ಇಟ್ಟಿದ್ದರು. ಈ ಬಗ್ಗೆ ಹರ್ಷವರ್ಧನ್ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸುವ ಜೊತೆಗೆ ತನ್ನ ನೆಚ್ಚಿನ ಬೈಕ್ ಫೋಟೋಗಳನ್ನು ಹಂಚಿಕೊಂಡಿದ್ದರು.
ಸದ್ಯ ಹರ್ಷವರ್ಧನ್ ಅವರ ನೆಚ್ಚಿನ ಹಳದಿ ಬಣ್ಣದ ರಾಯಲ್ ಎನ್ ಫೀಲ್ಡ ಬೈಕ್ ಮಾರಾಟವಾಗಿದ್ದು, ಅದರಿಂದ ಬಂದ ಹಣದಿಂದ ಆಕ್ಸಿಜನ್ ಸಾಂದ್ರಕ ಖರೀದಿಸಿ ಹೈದರಾಬಾದ್ ಸೈಬರ್ ಪೋಲೀಸರಿಗೆ ದಾನ ಮಾಡಿದ್ದಾರೆ. ಹರ್ಷವರ್ಧನ್ ಎನ್ ಜಿ ಒ ಜೊತೆ ಕೈಜೋಡಿಸಿದ್ದು, ಕೊರೊನಾ ಸಂಕಷ್ಟ ಈ ಸಮಯದಲ್ಲಿ ಫ್ರಂಟ್ ಲೈನ್ ಕೆಲಸಗಾರರ ಸಹಾಯಕ್ಕೆ ನಿಂತಿದ್ದಾರೆ.
ಸನಮ್ ತೇರಿ ಕಸಮ್ ಸಿನಿಮಾ ಮೂಲಕ ಸಿನಿಪ್ರೇಕ್ಷಕರ ಹೃದಯ ಗೆದ್ದಿರುವ ತೆಲುಗು ನಟ ಹರ್ಷವರ್ಧನ್ ಅವರ ಮಾನವೀಯ ಕೆಲಸಕ್ಕೆ ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.







