ಬೆಳಗಾವಿ: ಬಿಜೆಪಿ (BJP) ಕಾಲದಲ್ಲಿ ಯಾವುದೇ ಅತ್ಯಾಚಾರ ನಡೆದಿಲ್ವಾ ಎಂದು ಪ್ರಶ್ನಿಸಿರುವ ಸಿಎಂ ಸಿದ್ದರಾಮಯ್ಯ (Siddaramaiah) ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಬಿಜೆಪಿಯ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಮಹಿಳೆಯರಿಗೆ ರಕ್ಷಣೆ ಸಿಗಬೇಕು. ಸಮಾಜದಲ್ಲಿ ಸಮಾಜಘಾತುಕ ಶಕ್ತಿಗಳು ಇಂತಹ ಕೆಲಸ ಮಾಡುತ್ತವೆ. ಇದರ ಬಗ್ಗೆ ಕಠಿಣ ಕ್ರಮ ಕೈಗೊಳ್ಳಲೇಬೇಕು. ಆದರೆ, ಬಿಜೆಪಿಯ ಅಧಿಕಾರವಧಿಯಲ್ಲಿ ಇಂತಹ ಘಟನೆಗಳು ನಡೆದೇ ಇಲ್ವಾ ಎಂದು ಪ್ರಶ್ನಿಸಿದ್ದಾರೆ.








