ಚಿಕ್ಕಮಗಳೂರು: ಹಾಸನಾಂಬೆ ದೇವಿ (Hasanamba Devi) ದರ್ಶನಕ್ಕೆ ತೆರಳುತ್ತಿದ್ದ ದಂಪತಿ ಕಾರು ಅಪಘಾತವಾಗಿದ್ದು, ಪತ್ನಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಪತ್ನಿ ಸಾವನ್ನಪ್ಪಿದ್ದಾರೆ. ಈ ಘಟನೆ ಹಾಸನ (Hassan) ಜಿಲ್ಲೆಯ ಬೇಲೂರು ತಾಲೂಕಿನ ಕಲ್ಕೆರೆ ಗ್ರಾಮದಲ್ಲಿ ನಡೆದಿದೆ. ಚಿಕ್ಕಮಗಳೂರು (Chikkamagaluru) ತಾಲೂಕಿನ ಗವನಹಳ್ಳಿ ಗ್ರಾಮದ ನಿವಾಸಿ ವನಿತಾ (38) ಸಾವನ್ನಪ್ಪಿರುವ ದುರ್ದೈವಿ. ಪತ್ನಿ ವನಿತಾ ಅಪಘಾತದಲ್ಲಿ ಸಾವನ್ನಪ್ಪಿದ್ದು, ಪತಿ ಮಂಜು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಚಿಕ್ಕಮಗಳೂರಿನಿಂದ ಹಾಸನದ ಹಾಸನಾಂಬೆ ದೇವಿ ದರ್ಶನಕ್ಕೆ ಹೊರಟಿದ್ದ ಮಂಜು-ವನಿತಾ ದಂಪತಿಯ ಕಾರು ಬೇಲೂರು ತಾಲೂಕಿನ ಕಲ್ಕೆರೆ ಗ್ರಾಮದ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಪಲ್ಟಿಯಾಗಿ. ಕೂಡಲೇ ಗ್ರಾಮಸ್ಥರು ಇಬ್ಬರನ್ನು ಬದುಕಿಸಲು ಪ್ರಯತ್ನಿಸಿದ್ದಾರೆ. ಬೆಳಗಿನ ಜಾವದ ಕತ್ತಲಲ್ಲು ಕೂಡ ಕಲ್ಕೆರೆ ಗ್ರಾಮಸ್ಥರು ಕೆರೆಗೆ ಇಳಿದು ಕಾರಿಗೆ ಹಗ್ಗ ಕಟ್ಟಿ ಎಳೆದಿದ್ದಾರೆ. ಕಾರಿನ ಚಾಲಕ ಮಂಜು ಪ್ರಾಣಾಪಾಯದಿಂದ ಪಾರಾಗಿದ್ದು, ಮಂಜು ಪತ್ನಿ ವನಿತಾ ಸಾವನ್ನಪ್ಪಿದ್ದಾರೆ. ಕಾರಿನಿಂದ ಮಹಿಳೆಯನ್ನು ಹೊರತಂತ ಗ್ರಾಮಸ್ಥರು ಬದುಕಿಸಲು ಯತ್ನಿಸಿದ್ದಾರೆ. ಆದರೆ, ಕಾರು ಕೆರೆಯಲ್ಲಿ ಮುಳುಗಿ ನೀರು ಕುಡಿದಿದ್ದ ವನಿತಾ ಉಸಿರುಗಟ್ಡಿ ಸಾವನ್ನಪ್ಪಿದ್ದಾರೆ. ಈ ಕುರಿತು ಬೇಲೂರು (Beluru) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








