ಇಂದಿನಿಂದ ಹಾಸನಾಂಭ ಜಾತ್ರೋತ್ಸವಕ್ಕೆ ಚಾಲನೆ…
ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಹಾಸನ ಜಿಲ್ಲೆಯ ಅಧಿದೇವತೆ ಸುಪ್ರಸಿದ್ಧ ಹಾಸನಾಂಬ ದೇವಿ ದರ್ಶನ ಭಕ್ತರಿಗೆ ಇಂದಿನಿಂದ ಸಿಗಲಿದೆ. ಧಾರ್ಮಿಕ ವಿಧಿ ವಿಧಾನಗಳ ಮೂಲಕ ಇಂದು ಮಧ್ಯಾಹ್ನ 12.14 ಕ್ಕೆ ವಿದ್ಯುಕ್ತವಾಗಿ ಬಾಗಿಲು ತೆರೆಯಲಾಯಿತು.
ಅಕ್ಟೋಬರ್ 13 ರಿಂದ 27 ರವರೆಗೆ ಹಾಸನಾಂಬ ದೇವಾಲಯ ಬಾಗಿಲು ತೆರೆಯಲಿದೆ. ಈ ಬಾರಿ 15 ದಿನ ಬಾಗಿಲು ತೆರೆಯಲಿದ್ದು 12 ದಿನಗಳ ಕಾಲ ಹಾಸನಾಂಬೆ ಭಕ್ತರಿಗೆ ದರ್ಶನ ನೀಡಲಿದ್ದಾಳೆ. ಮೊದಲ ಹಾಗೂ ಕೊನೆಯ ದಿನ,ಮತ್ತು ಅ.25 ರಂದು ಸೂರ್ಯಗ್ರಹಣ ಇರುವುದರಿಂದ ಭಕ್ತರಿಗೆ ದೇವಿಯ ದರ್ಶನ ಇರುವುದಿಲ್ಲ. ಉಳಿದಂತೆ ಎಲ್ಲ ದಿನಗಳು ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ಅಶ್ವೀಜ ಮಾಸದ ಮೊದಲ ಗುರುವಾರ ಮಧ್ಯಾಹ್ನ 12.14ಕ್ಕೆ ದೇವಿಯ ಗರ್ಭಗುಡಿ ಬಾಗಿಲು ತೆರೆಯಲಾಗಿದ್ದು, ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದಲೂ ದೇವಿಯ ದರ್ಶನಕ್ಕಾಗಿ ಭಕ್ತಸಾಗರ ಹರಿದು ಬರಲಿದೆ.
Hasanambha temple: Hasanambha Jatrotsava starts from today…








