ಭೀಕರ ಸರಣಿ ಅಫಘಾತ – 9 ಮಂದಿ ಸ್ಥಳದಲ್ಲೇ ಸಾವು…
ಭೀಕರ ಸರಣಿ ಅಪಘಾತದಲ್ಲಿ ಒಂದೇ ಗ್ರಾಮದ 7 ಮಂದಿ ಸೇರಿ ಒಟ್ಟು 9 ಮಂದಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಧರ್ಮಸ್ಥಳದಿಂದ ಸ್ವಗ್ರಾಮಕ್ಕೆ ತೆರಳುವ ವೇಳೆ ಹಾಲಿನ ಲಾರಿ ಮತ್ತು ಬಸ್ ಮಧ್ಯೆ ಟೆಂಪೋ ಟ್ರಾವೆಲರ್ ಸಿಲುಕಿ ಸರಣಿ ಅಪಘಾತ ಸಂಭವಿಸಿದೆ.
ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ಬಾಣವಾರ ಹೋಬಳಿ ಗಾಂಧಿ ನಗರ ಗ್ರಾಮದ ಬಳಿ ಶನಿವಾರ ತಡರಾತ್ರಿ ಈ ದುರಂತ ಸಂಭವಿಸಿದೆ. ಶಿವಮೊಗ್ಗ-ಅರಸೀಕೆರೆಯ ರಾಷ್ಟ್ರೀಯ ಹೆದ್ದಾರಿ 69 ರಲ್ಲಿ ಘೋರ ದುರಂತ ನಡೆದಿದೆ. ಲಾರಿ ಮತ್ತು ಬಸ್ ಮಧ್ಯೆ ಟಿಟಿ ವಾಹನ ಸಿಲುಕಿ ಸಂಪೂರ್ಣ ನಜ್ಜುಗುಜ್ಜಾಗಿದೆ. ಲೀಲಾವತಿ (50), ಚೈತ್ರಾ (33), ಸಮರ್ಥ (10), ಡಿಂಪಿ (12), ತನ್ಮಯ್ (10), ಧ್ರುವ (2), ವಂದನಾ (20), ದೊಡ್ಡಯ್ಯ (60), ಭಾರತಿ (50) ಮೃತ ದುರ್ದೈವಿಗಳು.
ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ ಮಂಜುನಾಥನ ದರ್ಶನ ಪಡೆದುಕೊಂಡು ವಾಪಸ್ ತಮ್ಮ ಗ್ರಾಮಕ್ಕೆ ಹಿಂದಿರುಗುತ್ತಿದ್ದರು. ದರ್ಶನ್ ಪಡೆದವರೆಲ್ಲಾ ಟಿಟಿ ವಾಹನದಲ್ಲಿ ನಿದ್ರೆಗೆ ಜಾರಿದ್ದರು. ಇದೇ ಸಂದರ್ಭದಲ್ಲಿ ಜವರಾಯ ಅಟ್ಟಹಾಸ ಮೆರೆದಿದ್ದು ,9 ಮಂದಿ ದುರ್ಮರಣ ಹೊಂದಿದ್ದಾರೆ.
ಮೃತರದಲ್ಲಿ ನಾಲ್ವರು ಮಕ್ಕಳು ಸೇರಿದ್ದಾರೆ. ಕೆಎಸ್ಆರ್ಟಿ ಬಸ್, ಟಿಟಿ ವಾಹನ ಹಾಗೂ ಟ್ಯಾಂಕರ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಪರಿಣಾಮ ಟೆಂಪೋ ಟ್ರಾವೆಲರ್ನಲ್ಲಿದ್ದ 4 ಮಕ್ಕಳು ಸೇರಿದಂತೆ ಒಟ್ಟು 9 ಜನರು ಸಾವನ್ನಪ್ಪಿದ್ದಾರೆ. ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ಬಾಣವಾರ ಹೋಬಳಿ ಗಾಂಧಿ ನಗರ ಗ್ರಾಮದ ಬಳಿ ಶನಿವಾರ ತಡರಾತ್ರಿ ಈ ದುರಂತ ಸಂಭವಿಸಿದೆ.
ಒಟ್ಟು ಟಿಟಿ ವಾಹನದಲ್ಲಿ 14 ಮಂದಿ ಧರ್ಮಸ್ಥಳಕ್ಕೆ ತೆರಳಿದ್ದರು. ಮಂಜುನಾಥನ ಮುಂದೆ ತಮ್ಮ ಸಂಕಷ್ಟಗಳನ್ನು ಹೇಳಿಕೊಂಡು ಹರಕೆ ತೀರಿಸಿ ಆಶೀರ್ವಾದ ಪಡೆದು ಅಲ್ಲಿಂದ ವಾಪಸ್ ಆಗಿದ್ದರು. ಇನ್ನೇನು ಐದಾರು ಕಿಲೋಮೀಟರ್ನಲ್ಲಿ ಮನೆಗೆ ಸೇರೋ ಮೊದಲೇ ಈ ದುರಂತ ಸಂಭವಿಸಿದೆ. ಇನ್ನು ಘಟನೆಯಲ್ಲಿ ಗಾಯಗೊಂಡಿರುವವರನ್ನು ಹಾಸನ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಾಳಕ್ಕೆ ಬಾಣಾವರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
hassan accident: 9 pilgrims dead after head-on collision of tempo, milk van in arasikere banavara