Hassan | ಮಾರಾಕಾಸ್ತ್ರಗಳಿಂದ ಕೊಚ್ಚಿ ಪತ್ನಿಯ ಕೊಲೆಗೈದ ಪತಿ
ಹಾಸನ : ಮಾರಾಕಾಸ್ತ್ರಗಳಿಂದ ಕೊಚ್ಚಿ ಪತ್ನಿಯನ್ನ ಪತಿಯೇ ಕೊಲೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದ ತಂಬ್ಲಿಗೇರಿ ಗ್ರಾಮದಲ್ಲಿ ನಡೆದಿದೆ.
58 ವರ್ಷದ ರತ್ನಮ್ಮ ಕೊಲೆಯಾದ ಮಹಿಳೆಯಾಗಿದ್ದಾರೆ.
65 ವರ್ಷದ ಪರಮೇಶ್ವ ಕೊಲೆ ಆರೋಪಿಯಾಗಿದ್ದಾರೆ. ಕಾಫಿಯನ್ನು ಕಡಿಮೆ ಬೆಲೆ ಮಾರಾಟ ಮಾಡಿದ ವಿಚಾರಕ್ಕೆ ದಂಪತಿ ನಡುವೆ ಜಗಳವಾಗಿದೆ.
ಇದು ಅತಿರೇಕಕ್ಕೆ ಹೋಗಿ ಮಾರಾಕಾಸ್ತ್ರದಿಂದ ನಾಲ್ಕೈದು ಬಾರಿ ಪತ್ನಿಯ ತಲೆಗೆ ಹೊಡೆದು ಬರ್ಬರವಾಗಿ ಕೊಲೆ ಮಾಡಿ ಅಲ್ಲಿಂದ ಎಸ್ಕೇಪ್ ಆಗಿದ್ದಾರೆ.
ಇಂದು ಮನೆಯಿಂದ ವಾಸನೆ ಬರುತ್ತಿದ್ದ ಕಾರಣ ಮನೆಯ ಬೀಗ ಹೊಡೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.
ಸ್ಥಳಕ್ಕೆ ಶ್ವಾನದಳ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯಸಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.