Hassan : ಇನೋವಾ ಮತ್ತು ಸ್ವಿಫ್ಟ್ ಕಾರು ಮುಖಾಮುಖಿ – ಸ್ಥಳದಲ್ಲೇ ಐವರ ಸಾವು…
ಇನೋವಾ ಕಾರು ಮತ್ತು ಸ್ವಿಫ್ಟ್ ಕಾರುಗಳ ನಡುವೆ ಮುಖಾಮುಖಿ ಅಪಘಾತ ಸಂಭವಿಸಿ ಐವರು ಸಾವನಪ್ಪಿರುವ ಘಟನೆ ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ತಿಟ್ಟನಹೊಸಹಳ್ಳಿ ಗೇಟ್ ಬಳಿ ಸಂಭವಿಸಿದೆ.
ಮದುವೆ ಮುಗಿಸಿಕೊಂಡು ಹಾಸನಕ್ಕೆ ವಾಪಸ್ ಆಗುವ ವೇಳೆ ಈ ಅಪಘಾತ ಸಂಭವಿಸಿದ್ದು, ಸ್ಥಳದಲ್ಲಿ ಐವರು ಸಾವನ್ನಪ್ಪಿ, ಇನ್ನೂ ಐದು ಮಂದಿ ಗಾಯಗೊಂಡಿದ್ದಾರೆ.
ಇನ್ನೋವಾ ಕಾರಿನಲ್ಲಿದ್ದ ಹಾಸನ ಮೂಲದ ಶ್ರೀನಿವಾಸಮೂರ್ತಿ(74), ಜಯಂತಿ(60), ಪ್ರಭಾಕರ್ (75) ಹಾಗೂ ತಮಿಳುನಾಡು ಮೂಲದ ಸ್ವಿಫ್ಟ್ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿದ್ದು ಇವರ ಮಾಹಿತಿ ಇನ್ನೂ ತಿಳಿದುಬಂದಿಲ್ಲ.
ಗಾಯಗೊಂಡ ವಿಶ್ವೇಶ್ವರ ಭಟ್(50), ಎಂಜಿನಿಯರಿಂಗ್ ವಿದ್ಯಾರ್ಥಿಗಳಾದ ಅಚಲ್, ಗೌತಮ್, ಕೇವಿನ್, ಸರ್ವೇಶ್ ಎಂಬುವವರನ್ನ ಬಿ.ಜಿ.ನಗರದ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಾಗಿರುವ ಇನ್ನೂ ಮೂವರ ಸ್ಥಿತಿ ಗಂಭೀರವಾಗಿದೆ.
ಬೆಂಗಳೂರಿನಿಂದ ಹಾಸನದ ಕಡೆಗೆ ತೆರಳುತ್ತಿದ್ದ ಇನ್ನೋವಾ ಕಾರು, ರಸ್ತೆಯ ಡಿವೈಡರ್ ದಾಟಿ ಮತ್ತೊಂದು ರಸ್ತೆಯಲ್ಲಿ ಹಾಸನ ಕಡೆಗೆ ಬರುತ್ತಿದ್ದ ಸ್ವಿಫ್ಟ್ ಕಾರಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಬೇಡಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಿಂಡಿಗನವಿಲೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Hassan: Innova and Swift car collided – five died on the spot…