ಹಾಸನ | ಬೆಲೆ ಏರಿಕೆ ಖಂಡಿಸಿ ಜೆಡಿಎಸ್ ಸೈಕಲ್ ರ್ಯಾಲಿ JDS saaksha tv
ಹಾಸನ : ಬೆಲೆ ಏರಿಕೆಯನ್ನು ಖಂಡಿಸಿ ಜೆಡಿಎಸ್ ಕಾರ್ಯಕರ್ತರು ಹಾನಸದಲ್ಲಿ 500ಕ್ಕೂ ಹೆಚ್ಚು ಸೈಕಲ್ ಗಳಲ್ಲಿ ರ್ಯಾಲಿ ನಡೆಸಿ ಆಕ್ರೋಶ ಹೊರಹಾಕಿದ್ದಾರೆ.
ಜೆಡಿಎಸ್ ಮುಖಂಡ ಅಗಿಲೆ ಯೋಗೇಶ್ ನೇತೃತ್ವದಲ್ಲಿ ಸೈಕಲ್ ರ್ಯಾಲಿ ನಡೆದಿದೆ.
ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ ನಿರಂತರವಾಗಿ ಬೆಲೆ ಏರಿಕೆ ಆಗುತ್ತಲೇ ಇದೆ.
ಇದರಿಂದ ಜನಸಾಮಾನ್ಯರು ಜೀವನ ನಡೆಸುವುದೇ ಕಷ್ಟವಾಗಿದೆ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಕಾರ್ಯಕರ್ತರು ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದಾರೆ.
ಇನ್ನು ನಗರದ ಪ್ರಮುಖ ರಸ್ತೆಗಳಲ್ಲಿ ಜೆಡಿಎಸ್ ಕಾರ್ಯಕರ್ತರು ಸೈಕಲ್ ರ್ಯಾಲಿ ನಡೆಸಿದ ಕಾರಣ ಹಾಸನದ ಹಲವೆಡೆ ಸಂಚಾರ ಅಸ್ತವ್ಯಸ್ತವಾಗಿತ್ತು.