Hassan | ನಾಪತ್ತೆಯಾಗಿದ್ದ ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಶವವಾಗಿ ಪತ್ತೆ
ಹಾಸನ : ನಾಪತ್ತೆಯಾಗಿದ್ದ ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಶವವಾಗಿ ಪತ್ತೆಯಾಗಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಮೈಲನಹಳ್ಳಿ ಗ್ರಾಮದಲ್ಲಿ ನಡೆದಿದೆ.
39 ವರ್ಷದ ಸುಧಾ ಮಹಿಳಾ ಪೊಲೀಸ್ ಪೇದೆಯಾಗಿದ್ದಾರೆ.
ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಅರಸೀಕೆರೆ-ತಿಪಟೂರು ರಾಷ್ಟ್ರೀಯ ಹೆದ್ದಾರಿ 206 ರ ಮೈಲನಹಳ್ಳಿ ಗ್ರಾಮದ ಬಳಿ ಶವ ಸಿಕ್ಕಿದೆ.
ಸುಧಾ ಅವರು ಹುಳಿಯಾರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಹುಳಿಯಾರು ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕೇಸ್ ದಾಖಲಾಗಿತ್ತು.
ಹಣಕಾಸು ವ್ಯವಹಾರಕ್ಕೆ ಸುಧಾರನ್ನು ಕಾರಿನಲ್ಲಿ ಕರೆದುಕೊಂಡು ಮಂಜುನಾಥ್ ಎಂಬುವವರು ಕೊಲೆ ಮಾಡಿದ್ದಾರೆ. ಮಂಜುನಾಥ್ ಸುಧಾ ಚಿಕ್ಕಪ್ಪನ ಮಗ.
ಕೊಲೆ ಮಾಡಿ ನಿನ್ನೆ ಸಂಜೆ ಶಿವಮೊಗ್ಗದ ಲಾಡ್ಜ್‌ವೊಂದರಲ್ಲಿ ಡೆತ್ ನೋಟ್ ಬರೆದಿಟ್ಟು ಮಂಜುನಾಥ್ ನೇಣಿಗೆ ಶರಣಾಗಿದ್ದಾರೆ.
ಶವ ಸಿಕ್ಕ ಸ್ಥಳಕ್ಕೆ ಅರಸೀಕೆರೆ ಗ್ರಾಮಾಂತರ ಹಾಗೂ ತುಮಕೂರು ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ. Hassan