ಬೆಂಗಳೂರು : ಸಂತ್ರಸ್ತೆಯ ಪೋಷಕರನ್ನು ಹೊರಗಿಟ್ಟು, ಯುಪಿಯ ಹತ್ರಾಸ್ ನಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿ ಮೃತಪಟ್ಟ ಯುವತಿಯ ಅಂತ್ಯಸಂಸ್ಕಾರವನ್ನು ನೇರವೇರಿಸಿ ಪೊಲೀಸರ ವಿರುದ್ಧ ದೇಶದೆಲ್ಲೆಡೆ ಭಾರಿ ವ್ಯಕ್ತವಾಗುತ್ತಿದೆ.
ಅಂತೆಯೇ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ದಿನೇಶ್ದ ಗುಂಡೂರಾವ್ ಕೂಡ ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಉತ್ತರಪ್ರದೇಶದಲ್ಲಿ ನಡೆದ ದಲಿತ ಯುವತಿಯ ಅತ್ಯಾಚಾರ ಮತ್ತು ಕೊಲೆಯ ಹೊಣೆಯನ್ನು ಯೋಗಿ ಆದಿತ್ಯನಾಥ್ ಮಾತ್ರವಲ್ಲ, ಅವರನ್ನು ಬೆಂಬಲಿಸುತ್ತಿರುವ ನರೇಂದ್ರ ಮೋದಿ ಹಾಗೂ ಸಮಸ್ತ ಸಂಘ ಪರಿವಾರ ಕೂಡ ಹೊರಬೇಕಾಗುತ್ತದೆ.
ತಕ್ಷಣ ಯೋಗಿ ಆದಿತ್ಯನಾಥ್ ಅವರನ್ನು ಕಿತ್ತು ಹಾಕಿ ಉತ್ತರಪ್ರದೇಶವನ್ನು ರಕ್ಷಿಸಿ ಎಂದು ಕಿಡಿಕಾರಿದ್ದಾರೆ.
https://twitter.com/siddaramaiah/status/1311179093442928645?s=20
ಇನ್ನೊಂದು ಟ್ವೀಟ್ ನಲ್ಲಿ, ಅತ್ಯಾಚಾರಕ್ಕೊಳಗಾಗಿ ಸಾವಿಗೀಡಾದ ಉತ್ತರಪ್ರದೇಶದ ದಲಿತ ಯುವತಿಗೆ ಗೌರವಪೂರ್ವಕ ಅಂತ್ಯಕ್ರಿಯೆಗೂ ಅವಕಾಶ ನೀಡದೆ,
ಹೆತ್ತವರನ್ನು ಗೋಳಾಡಿಸಿದ ಯೋಗಿ ಆದಿತ್ಯನಾಥ್ ಕಾವಿಧಾರಿಗಳ ಪಾಲಿನ ಕಳಂಕ. ಇವರ ಆಡಳಿತದಲ್ಲಿ ಉತ್ತರಪ್ರದೇಶದ ಯಾವ ಹೆಣ್ಣು ಮಕ್ಕಳು ಸುರಕ್ಷಿತವಲ್ಲ. ಮೊದಲು ಇವರನ್ನು ವಜಾ ಮಾಡಿ ಎಂದು ಆಗ್ರಹಿಸಿದ್ದಾರೆ.
ಇನ್ನು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿ, ಹತ್ರಾಸ್ ನಲ್ಲಿ ನಡೆದ ಘಟನೆಯ ಭಯಾನಕ ಅಂತ್ಯವಾಗಿದೆ.
ಇದನ್ನೂ ಓದಿ : ಸಂತ್ರಸ್ತೆ ಕುಟುಂಬವನ್ನು ಹೊರಗಿಟ್ಟು : ಪೊಲೀಸರಿಂದಲೇ ಯುಪಿಯ ‘ನಿರ್ಭಯಾ’ ಅಂತ್ಯಸಂಸ್ಕಾರ
ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಆಡಳಿತದಲ್ಲಿ ಇಂತಹ ಅನೇಕ ಭಯಾನಕ ಘಟನೆಗಳನ್ನು ನೋಡುತ್ತಿದ್ದೇವೆ.
ಯೋಗಿ ಅವರು ಕೆಟ್ಟದ್ದನ್ನು ರಕ್ಷಿಸುವ ಹಾಗೂ ಪ್ರೇರೇಪಿಸುವಂತಹ ಆಡಳಿತವನ್ನು ನಡೆಸುತ್ತಿದ್ದಾರೆ.
ಇದು ಅತ್ಯಂತ ಕ್ರೂರ ಮತ್ತು ಅಮಾನವೀಯವಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ಸಂಸ್ಕೃತಿಯ ರಕ್ಷಕರ ಮುಖವಾಡ ಹಾಕಿಕೊಂಡಿರುವ #BJP ನಾಯಕರಿಗೆ ದಲಿತ ಹುಡುಗಿಯ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಕಣ್ಣಿಗೆ ಕಾಣಿಸುವುದಿಲ್ಲವೇ?
ಇದೇನಾ ನೀವು ಜನರ ಮುಂದೆ ಪ್ರತಿಪಾದಿಸುತ್ತಿರುವ #YogiAdityanath ಯ ಮಾದರಿ ರಾಜ್ಯ?
ಅತ್ಯಾಚಾರಿಗಳ ರಾಜ್ಯ ಉತ್ತರ ಪ್ರದೇಶದಲ್ಲಿ ಹೆಣ್ಣು ಮಕ್ಕಳನ್ನು ಕಾಪಾಡುವರ್ಯಾರು?#HathrasHorror
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) September 30, 2020








