Haveri : ರಸ್ತೆ ಅಗಲೀಕರಣಕ್ಕೆ ಆಗ್ರಹಿಸಿ ಬ್ಯಾಡಗಿ ಬಂದ್
ಹಾವೇರಿ : ಬ್ಯಾಡಗಿ ಪಟ್ಟಣದ ಮುಖ್ಯರಸ್ತೆ ಅಗಲೀಕರಣಕ್ಕೆ ಆಗ್ರಹಿಸಿ ಬ್ಯಾಡಗಿ ಬಂದ್ ಮಾಡಲಾಗಿದೆ.
ಬ್ಯಾಡಗಿ ಮುಖ್ಯರಸ್ತೆ ಅಗಲೀಕರಣ ಆಗುವಂತೆ ಆಗ್ರಹಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಗುತ್ತಿದೆ.
ಸಾರ್ವಜನಿಕರ ಹಿತದೃಷ್ಟಿಯಿಂದ ಪಟ್ಟಣದ ಮುಖ್ಯರಸ್ತೆ ಅಗಲೀಕರಣ ಆಗಬೇಕಾಗಿರುವುದು ಬಹು ಅಗತ್ಯವಾಗಿದೆ.

ಆದರೆ ರಾಜ್ಯ ಸರ್ಕಾರ ಈ ಬಗ್ಗೆ ಕಠಿಣ ನಿರ್ಧಾರ ಕೈಗೊಂಡಿಲ್ಲ.
ಮುಖ್ಯರಸ್ತೆ ಅಗಲೀಕರಣ ಕಾಮಗಾರಿಯನ್ನು ಪ್ರಾರಂಭಿಸುವಂತೆ ಪ್ರತಿಭಟನಾಕಾರರು ಒತ್ತಾಯ ಮಾಡುತ್ತಿದ್ದಾರೆ.
ವಿವಿಧ ಸಂಘಟನೆಗಳಿಂದ ಬ್ಯಾಡಗಿ ಪಟ್ಟಣ ಬಂದ್ ಗೆ ಕರೆ ನೀಡಲಾಗಿದ್ದು, ಏಷ್ಯಾದ ಅತಿದೊಡ್ಡ ಮೆನಸಿನಕಾಯಿ ಮಾರುಕಟ್ಟೆ ಸ್ಥಬ್ಧವಾಗಿದೆ.








