Haveri : 5ನೇ ತರಗತಿವರೆಗೆ ಕನ್ನಡ ಕಡ್ಡಾಯ ಪ್ರತಿಪಾದಿಸಿದ ಸಮ್ಮೇಳನಾಧ್ಯಕ್ಷರಾದ ದೊಡ್ಡ ರಂಗೇಗೌಡರು…
ಹಾವೇರಿಯಲ್ಲಿ ಇಂದಿನಿಂದ ಆರಂಭವಾಗಿರುವ 86 ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಉದ್ಘಾಟಿಸಿದರು. ಸಮ್ಮೇಳನದ ಸರ್ವಾಧ್ಯಕ್ಷ ದೊಡ್ಡ ರಂಗೇಗೌಡ, ನಿಕಟಪೂರ್ವ ಸಮ್ಮೇಳನಾಧ್ಯಕ್ಷ ಎಚ್.ಎಸ್. ವೆಂಕಟೇಶಮೂರ್ತಿ,ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಮಹೇಶ ಜೋಶಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಅಗಲಿದ ಸಿದ್ದೇಶ್ವರ ಸ್ವಾಮಿಜಿಗಳಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ನಂತರ ನಾಡಗೀತೆ ಮತ್ತು ರೈತ ಗೀತೆಯನ್ನ ಹಾಡಲಾಯಿತು. ನಂತರ ಮಾತನಾಡಿದ ಸಮ್ಮೇಳನಾಧ್ಯಕ್ಷರಾದ ದೊಡ್ಡ ರಂಗೇಗೌಡರು ಕರ್ನಾಟಕದಲ್ಲೆಡೆ ಸರ್ಕಾರಿ, ಸರ್ಕಾರೇತರ ಬ್ಯಾಂಕಿಂಗ್ , ಕಾರ್ಪೊರೇಟ್ ವಲಯಗಳಲ್ಲಿ ಕನ್ನಡ ಬಳಕೆಯಾಗಬೇಕು. ಇದರಿಂದಾಗಿ ಉದ್ಯೋಗಾವಕಾಶಗಳು ಹೆಚ್ಚಾಗಿ, ಕನ್ನಡಿಗರಿಗೆ ಅವಕಾಶಗಳು ದೊರೆಯುವಂತಾಗಲಿದೆ ಎಂದು ಪ್ರತಿಪಾದಿಸಿದರು.
ಹೊರ ರಾಜ್ಯಗಳಿಂದ ಇಲ್ಲಿಗೆ ಬರುವ ಅಧಿಕಾರಿಗಳು, ಉದ್ಯಮಿಗಳು ಸೇರಿದಂತೆ ಎಲ್ಲರೂ ಕನ್ನಡ ಕಲಿಯಬೇಕು. ಗಡಿ ಭಾಗಗಳಲ್ಲಿ ಕನ್ನಡದ ಉಳಿವಿಗೆ ಮತ್ತು ಶೈಕ್ಷಣಿಕ ಮೂಲಸೌಕರ್ಯಗಳಿಗೆ ಸರ್ಕಾರ ಅಗತ್ಯ ಕ್ರಮಗಳನ್ನು 5ನೇ ತರಗತಿವರೆಗೆ ಕನ್ನಡ ಕಡ್ಡಾಯಗೊಳಿಸಬೇಕು. ವೈದ್ಯಕೀಯ ಮತ್ತು ತಾಂತ್ರಿಕ ಶಿಕ್ಷಣವನ್ನು ಕನ್ನಡದಲ್ಲೇ ಕಲಿಸಲು ಪಠ್ಯಕ್ರಮ ರೂಪಿಸಬೇಕು. ಮುಂದಿನ ವರ್ಷದೊಳಗೆ ಕನ್ನಡದಲ್ಲೇ ಕಲಿಸುವ ಒಂದು ಕಾಲೇಜನ್ನು ಆರಂಭಿಸಬೇಕೆಂದು ಒತ್ತಾಯಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಸಂಘ-ಸಂಸ್ಥೆಗಳಿಗೆ ನೀಡಲಾಗುವ ಧನಸಹಾಯವನ್ನು ಮುಂದುವರಿಸಬೇಕು. ಕನ್ನಡ ಹಕ್ಕಿನ ಮತ್ತು ಅನ್ನದ ಭಾಷೆಯನ್ನಾಗಿಸಲು ಅಗತ್ಯ ಇರುವ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ಸಲಹೆ ನೀಡಿದರು.
Haveri: DoddaRangeGowdru advocated Kannada as compulsory up to 5th standard…