Haveri | ವಿದ್ಯುತ್ ಶಾಟ್ ಸರ್ಕ್ಯೂಟ್ ನಿಂದ ಬೆಂಕಿ
ಹಾವೇರಿ : ವಿದ್ಯುತ್ ಶಾಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹತ್ತಿಕೊಂಡು ಬೈಕ್ ಗ್ಯಾರೇಜ್ ಸುಟ್ಟು ಭಸ್ಮವಾಗಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಗೊಂದಿ ಗ್ರಾಮದಲ್ಲಿ ನಡೆದಿದೆ.
ಗೊಂದಿ ಗ್ರಾಮದ ಅರುಣ ಕ್ಷವರದ ಎಂಬುವವರಿಗೆ ಸೇರಿದ ಗ್ಯಾರೇಜ್ ಇದಾಗಿದೆ.
ನಿನ್ನೆ ರಾತ್ರಿ ಬೈಕ್ ಗ್ಯಾರೇಜ್ ಬಂದ್ ಮಾಡಿ ಮನೆಗೆ ಹೋಗಿದ್ದ ವೇಳೆ ಗ್ಯಾರೆಜ್ ನಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿದೆ.

ಘಟನೆಯಲ್ಲಿ ಆರು ಬೈಕ್ ಗಳು ಸುಟ್ಟು ಕರಕಲಾಗಿವೆ.
ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಬೇಟಿ ನೀಡಿ, ಬೆಂಕಿಯನ್ನು ನಂದಿಸಿದ್ದಾರೆ.
ಈ ಸಂಬಂಧ ಆಡೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.