Haveri- Kannada Sahitya Sammelna: ಜನವರಿ 6ರಿಂದ 8ರವರೆಗೆ ಅದ್ದೂರಿ ಕನ್ನಡ ಸಾಹಿತ್ಯ ಸಮ್ಮೇಳನ…
ಜನವರಿಯಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆ ಹಾವೇರಿಯಲ್ಲಿ ನಿನ್ನೆ ನಡೆಯಿತು.
ಈ ವೇಳೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ಅವರು ಮಾತನಾಡಿ ಕೋವಿಡ್ ಕಾರಣದಿಂದ ಕಳೆದ ಎರಡು ವರ್ಷಗಳಿಂದ ಸಮ್ಮೇಳನವನ್ನು ನಡೆಸಲು ಸಾಧ್ಯವಾಗಿರಲಿಲ್ಲ. ಈ ಬಾರಿ ಹಾವೇರಿಯಲ್ಲಿ ಜನವರಿ 6ರಿಂದ 8ರವರೆಗೆ ಮೂರು ದಿನಗಳ ಕಾಲ ಅದ್ಧೂರಿಯಾಗಿ ಸಮ್ಮೇಳನ ನಡೆಸಲಾಗುವುದು ಎಂದು ತಿಳಿಸಿದರು.
ಸಮ್ಮೇಳನದ ಯಶಸ್ವಿಗೆ ಐದು ಸಾವಿರ ಸ್ವಯಂ ಸೇವಕರನ್ನು ನೇಮಿಸಲಾಗಿದೆ. ಧಾರವಾಡ- ಹಾವೇರಿ- ದಾವಣಗೆರೆಯಲ್ಲಿ ಅತಿಥಿಗಳಿಗೆ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.
ಶಿವರಾಂ ಹೆಬ್ಬಾರ್, ಸಮ್ಮೇಳದ ಹಿನ್ನೆಲೆಯಲ್ಲಿ ಅಧಿಕಾರಿಗಳ ನೇತೃತ್ವದಲ್ಲಿ 20 ಉಪಸಮಿತಿಗಳನ್ನು ರಚಿಸಲಾಗಿದೆ. 25 ಸಾವಿರ ಅತಿಥಿಗಳಿಗೆ ವಸತಿ ವ್ಯವಸ್ಥೆ ಮಾಡಲಾಗುವುದು. ಅಲ್ಲದೆ ಸಮ್ಮೇಳನದಲ್ಲಿ ಮೂರು ಲಕ್ಷ ಸಾಹಿತ್ಯಾಸಕ್ತರು ಭಾಗಿಯಾಗುವ ನಿರೀಕ್ಷೆ ಇದೆ. ಸಮ್ಮೇಳನ ನಡೆಯುವ ಮೂರು ದಿನಗಳ ಕಾಲ ಮೈಸೂರು ದಸರಾ ರೀತಿಯಲ್ಲಿ ಹಾವೇರಿ ನಗರಕ್ಕೆ ವಿಶೇಷಾ ದೀಪಾಲಂಕಾರವನ್ನು ಏರ್ಪಡಿಸಲಾಗುವುದು ಎಂದರು.
Haveri: From January 6 to 8, Adduri Kannada Sahitya Sammelna…