Haveri : 86ನೇ ಕನ್ನಡ ಸಾಹಿತ್ಯ ಸಮ್ಮೇಳನ – 5 ಪಿಯು ಕಾಲೇಜುಗಳಿಗೆ ರಜೆ
ಹಾವೇರಿಯಲ್ಲಿ 86ನೇ ಕನ್ನಡ ಸಾಹಿತ್ಯ ಸಮ್ಮೇಳನ
ಜ.6, 7ರಂದು ಐದು ಪಿಯು ಕಾಲೇಜುಗಳಿಗೆ ರಜೆ
ಸರ್ಕಾರಿ ಪದವಿ ಪೂರ್ವ ಕಾಲೇಜು ಹಾವೇರಿ,
ಗುಡ್ಲೆಪ್ಪ ಹಳ್ಳಿಕೇರಿ ಪದವಿ ಪೂರ್ವ ಕಾಲೇಜು ,
ಸೇರಿ 5 ಕಾಲೇಜುಗಳಿಗೆ ರಜೆ
ಹಾವೇರಿಯಲ್ಲಿ ಜನವರಿ 6, 7, 8ರಂದು 86ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಹೀಗಾಗಿ ಜನವರಿ 6 ಮತ್ತು 7ರಂದು ಹಾವೇರಿಯ ಐದು ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಪದವಿ ಪೂರ್ವ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಸರ್ಕಾರಿ ಪದವಿ ಪೂರ್ವ ಕಾಲೇಜು ಹಾವೇರಿ, ಗುಡ್ಲೆಪ್ಪ ಹಳ್ಳಿಕೇರಿ ಪದವಿ ಪೂರ್ವ ಕಾಲೇಜು, ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು, ಎಸ್ ಜೆ.ಎಂ ಪದವಿ ಪೂರ್ವ ಕಾಲೇಜು, ಎಸ್ಎಂಎಸ್ ಪದವಿ ಪೂರ್ವ ಕಾಲೇಜು ಸೇರಿ ಒಟ್ಟು ಐದು ಕಾಲೇಜಿಗೆ ರಜೆ ನೀಡಲಾಗಿದೆ.