ಕಲಬುರಗಿ: ವಾರೆಂಟ್ ಜಾರಿಯಾಗಿದ್ದರೂ ಕೂಡ ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ಜೈ ಭಾರತ್ ಮಾತಾ ಸೇವಾ ಸಮಿತಿಯ ಸಂಸ್ಥಾಪಕ ಅಧ್ಯಕ್ಷ, ನಿರಗುಡಿ ಹವಾ ಮಲ್ಲಿನಾಥ್ ಮುತ್ಯಾನನ್ನು ಪೊಲೀಸರು ಬಂಧಿಸಿದ್ದಾರೆ.
2017ರ ಅಟ್ರಾಸಿಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರಗಿಯ ಎರಡನೇ ಹೆಚ್ಚುವರಿ ನ್ಯಾಯಲಯದಿಂದ ವಾರೆಂಟ್ ಜಾರಿ ಮಾಡಲಾಗಿತ್ತು. ನೋಟಿಸ್ ನೀಡಿದರೂ ನ್ಯಾಯಾಲಯಕ್ಕೆ ಹಾಜರಾಗದ ಹವಾ ಮಲ್ಲಿನಾಥ್ ಮುತ್ಯಾನನ್ನು ಕೋರ್ಟ್‌ಗೆ ಹಾಜರಾದ ಸಂದರ್ಭದಲ್ಲಿ ಬಂಧಿಸಲಾಗಿದೆ.
2017ರಲ್ಲಿ ಯುವತಿಗೆ ವಂಚನೆ ಮಾಡಿದ ಆರೋಪದಲ್ಲಿ ಪ್ರಕಾಶ್ ಸ್ವಾಮೀಜಿ ಹಾಗೂ ಹವಾ ಮಲ್ಲಿನಾಥ್ ಮುತ್ಯಾನ ಮೇಲೆ ಆರೋಪ ಕೇಳಿ ಬಂದಿತ್ತು. ಹೀಗಾಗಿ ನ್ಯಾಯಲಯ ನೋಟಿಸ್ ನೀಡಿತ್ತು. ಆದರೆ, ಕೋರ್ಟ್ ಗೆ ಹಾಜರಾಗಿರಲಿಲ್ಲ. ವಾರೆಂಟ್ ಜಾರಿಯಾದ ಹಿನ್ನೆಲೆಯಲ್ಲಿ ಕೋರ್ಟ್ ಮುಂದೆ ಹವಾ ಮಲ್ಲಿನಾಥ್ ಮುತ್ಯಾ ಹಾಜರಾಗಿದ್ದರು. ಈ ವೇಳೆ ಮಲ್ಲಿನಾಥ್ ಮುತ್ಯಾನನ್ನು ವಶಕ್ಕೆ ಪಡೆದ ನ್ಯಾಯಾಲಯ ಮಾರ್ಚ್ 2ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎನ್ನಲಾಗಿದೆ.