ನಾನು ನಂದೇ ಆದ ಮಾರ್ಗದಲ್ಲಿ ಪಕ್ಷ ಕಟ್ತೀನಿ : ಹೆಚ್ ಡಿ ದೇವೇಗೌಡ

1 min read
HD Deve Gowda

ನಾನು ನಂದೇ ಆದ ಮಾರ್ಗದಲ್ಲಿ ಪಕ್ಷ ಕಟ್ತೀನಿ : ಹೆಚ್ ಡಿ ದೇವೇಗೌಡ

ಬೆಂಗಳೂರು : ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದ ನಾಯಕರಾಗಿ ಅಭ್ಯರ್ಥಿಗಳನ್ನು ಗೆಲ್ಲಿಸಲು ಏನೇನ್ ಮಾಡ್ಬೇಕೋ ಮಾಡ್ತಾರೆ. ನಾನು ನಂದೇ ಆದ ಮಾರ್ಗದಲ್ಲಿ ಪಕ್ಷ ಕಟ್ತೀನಿ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹೇಳಿದ್ದಾರೆ.

ಬೆಂಗಳೂರಿನಲ್ಲಿನ ಜೆಪಿ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್ ಡಿ ದೇವೇಗೌಡ ಅವರು, ಉಪಚುನಾವಣಾ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿದರು.

ಉಪಚುನಾವಣೆಯಲ್ಲಿ ಸೋಲು, ಗೆಲುವಿನ ಬಗ್ಗೆ ಚರ್ಚಿಸುವುದಕ್ಕಿಂತ 2023 ರ ಸಾರ್ವತ್ರಿಕ ಚುನಾವಣೆಗೆ ನಾನು ಈಗಿನಿಂದಲೇ ಕೆಲಸ ಮಾಡಬೇಕೆಂದು ತೀರ್ಮಾನಿಸಿದ್ದೇನೆ.

ಹೆಚ್.ಡಿ. ಕುಮಾರಸ್ವಾಮಿ, ರಾಜ್ಯಾಧ್ಯಕ್ಷ ಹೆಚ್.ಕೆ. ಕುಮಾರಸ್ವಾಮಿ, ವಿಧಾನಪರಿಷತ್ ಸದಸ್ಯ ತಿಪ್ಪೇಸ್ವಾಮಿ ಸೇರಿದಂತೆ ಹಲವರು ಸಭೆ ಮಾಡಿ ಚರ್ಚೆ ಮಾಡಿದ್ದೇವೆ.

HD Deve Gowda saaksha tv
H D Deve Gowda

ನ.8ರಿಂದ ಎರಡನೇ ಹಂತದ ಕಾರ್ಯಾಗಾರ ನಡೆಯಲಿದೆ. ಅದಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದರು.

ಇನ್ನು ಜನರ ತೀರ್ಮಾನವನ್ನು ನಾನು ಸ್ವಾಗತಿಸುತ್ತೇನೆ. ಆದ್ರೆ ಪ್ರಾದೇಶಿಕ ಪಕ್ಷ ಉಳಿಸಲು ಕೆಲಸ ಮಾಡುತ್ತೇವೆ.

ಕಾಂಗ್ರೆಸ್ ಉಪಚುನಾವಣೆಯಲ್ಲಿ ಒಂದು ಸ್ಥಾನ ಗೆದ್ದಿದ್ದಕ್ಕೆ ಬೀಗುತ್ತಿದೆ.

ಆ ಪಕ್ಷದ ನಾಯಕರ ಬಗ್ಗೆ ನಾನು ಮಾತನಾಡಲ್ಲ. ಸಿದ್ದರಾಮಯ್ಯ ಅವರು ಪಕ್ಷದ ನಾಯಕರಾಗಿ ಅಭ್ಯರ್ಥಿಗಳನ್ನು ಗೆಲ್ಲಿಸಲು ಏನೇನ್? ಮಾಡ್ಬೇಕೋ ಮಾಡ್ತಾರೆ.

ನಾನು ನಂದೇ ಆದ ಮಾರ್ಗದಲ್ಲಿ ಪಕ್ಷ ಕಟ್ತೀನಿ ಎಂದು ದೇವೇಗೌಡರು ಹೇಳಿದರು.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd