ತುಮಕೂರು : ದೇವೇಗೌಡರು ಇಬ್ಬರು ಮೇಲೆ ಹಾಕ್ಕೊಂಡು ಹೋಗ್ತಾವ್ರೇ.. ಹತ್ತಿರದಲ್ಲೇ ಇದೇ ನಾಲ್ಕರ ಮೇಲೆ ಹೋಗೋದು ಎಂದು ಮಾಜಿ ಶಾಸಕ ಕೆ.ಎನ್.ರಾಜಣ್ಣ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ..
ಮಧುಗಿರಿ ತಾಲ್ಲೂಕಿನ ಕಾವಣದಾಲ ಕಾರ್ಯಕ್ರಮವೊಂದ್ರಲ್ಲಿ ಮಾತನಾಡ್ತಾ , ಇದು ನನ್ನ ಕೊನೆಯ ಚುನಾವಣೆ.. ಶೋಕಿಗೆ,ಮುಖಸ್ಥುತಿಗೆ ರಾಜಕಾರಣ ಮಾಡೋದು ಬೇಡ.. ನಾನು ಎಂಎಲ್ಎ ಆದ್ರೇ ನೀವೆಲ್ಲಾ ಎಂಎಲ್ಎಗಳು ಇದ್ದಂಗೆ.. ನೀವು ಹೋರಾಟ ಮಾಡಿ ನಾನು ಎಂಎಲ್ಎ ಆದ್ರೇ.. ನಾನು ಸುಮ್ಮನೆ ನಾಮಕಾವಸ್ಥೆಗೆ ಇರ್ತೀನಿ.. ಏನಾದ್ರೂ ಕೆಲಸ ಆಗಬೇಕಾದ್ರೆ ನೀವೇ ಅಧಿಕಾರಿಗಳನ್ನ ಕೇಳೋ ಶಕ್ತಿ ನಿಮಗೆ ಬರುತ್ತೆ..
ಮುಂದಿನ ದಿನಗಳಲ್ಲಿ ಪ್ರತಿ ಮನೆ ಬಾಗಿಲಿಗೂ ಬಂದು ಓಟ್ ಕೇಳ್ತೀನಿ.. ಇದು ನನ್ನ ಕೊನೆ ಎಲೆಕ್ಷನ್,ಮುಂದೆ ನೀವು ನಿಂತ್ಕೋ ಅಂದ್ರೂ ನಿಲ್ಲಲ್ಲಾ.. ನನಗೆ ಆಗಲೇ 72 ವರ್ಷ,77 ಆದ್ರೆ ಕೈಕಾಲು ಅಲಾಡ್ತಿರುತ್ತೆ..
ಸರ್ಕಾರ ಬಂದ್ರೇ ನೂರಕ್ಕೆ ನೂರರಷ್ಟು ಮಂತ್ರಿ ಆಗ್ತೀನಿ.. ದೇವೇಗೌಡರು ಇಬ್ಬರು ಮೇಲೆ ಹಾಕ್ಕೊಂಡು ಹೋಗ್ತಾವ್ರೇ , ಇನ್ನೂ ಹತ್ತಿರದಲ್ಲೇ ಇದೇ ನಾಲ್ಕರ ಮೇಲೆ ಹೋಗೋದು ಎನ್ನುತ್ತಾ ಭುಜದ ಮೇಲೆ ಕೈ ಹಾಕೋ ರೀತಿ ತೋರಿಸಿ ರಾಜಣ್ಣ ಹೇಳಿಕೆ ನೀಡಿದ್ದಾರೆ..