ರಾಧಿಕಾ ಕುರಿತ ಮಾಧ್ಯಮದವರ ಪ್ರಶ್ನೆಗೆ ಯಾರಪ್ಪ ಅವರೆಲ್ಲ ಎಂದ ಹೆಚ್ ಡಿಕೆ
ಮಂಡ್ಯ : ಯುವರಾಜ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಧಿಕಾ ಕುಮಾರಸ್ವಾಮಿ ಅವರನ್ನು ಸಿಸಿಬಿ ವಿಚಾರಣೆ ನಡೆಸಿದೆ. ಈ ಬಗ್ಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಸುದ್ದಿಗಾರರು ಪ್ರಶ್ನಿಸಿದ್ದು, ಅದು ಯಾರೋ ನನಗೆ ಗೊತ್ತಿಲ್ಲ ಎಂದು ಉತ್ತರ ನೀಡಿದ್ದಾರೆ.
ವಂಚಕ ಯುವರಾಜ್ ಸ್ವಾಮಿ ಖಾತೆಯಿಂದ ಖ್ಯಾತ ನಟಿ ರಾಧಿಕಾ ಕುಮಾರಸ್ವಾಮಿ ಖಾತೆಗೆ ಪಹಣ ವರ್ಗಾವಣೆ ಪ್ರಕರಣ ಸಂಬಂಧ, ನಟಿಗೆ ಸಿಸಿಬಿ ನೋಟಿಸ್ ಜಾರಿ ಮಾಡಿತ್ತು.
ಅಂತರರಾಷ್ಟ್ರೀಯ ವಿಮಾನಗಳ ಹಾರಾಟಕ್ಕೆ ನಿರ್ಬಂಧ ವಿಧಿಸಿದ ಚೀನಾ..!
ನೊಟೀಸ್ ಅನ್ವಯ ರಾಧಿಕಾ ವಿಚಾರಣೆ ಹಾಜರಾಗಿದ್ದರು. ಆರೋಪಿ ಯುವರಾಜ್ ಖಾತೆಯಿಂದ ರಾಧಿಕಾ ಕುಮಾರಸ್ವಾಮಿಯವರಿಗೆ ಕೋಟಿ ಕೋಟಿ ಹಣ ವರ್ಗಾವಣೆ ಆಗಿದೆ ಎನ್ನುವ ಆರೋಪಗಳು ಕೇಳಿ ಬಂದಿದೆ. ಈ ಹಿನ್ನೆಲೆ ಅವರನ್ನು ಸಿಸಿಬಿ ವಿಚಾರಣೆ ನಡೆಸಿತ್ತು.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನೇರಲೆಕೆರೆ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರು ಪೂರೈಸುವ ಯೋಜನೆ ಶಂಕುಸ್ಥಾಪನೆ ಕಾರ್ಯಕ್ರಮ ಮುಗಿಸಿ ಸುದ್ದಿಗಾರರೊಂದಿಗೆ ಕುಮಾರಸ್ವಾಮಿ ಮಾತನಾಡಿದರು.
ಈ ವೇಳೆ, ರಾಧಿಕಾ ವಿಚಾರವಾಗಿ, ‘ಯಾರಪ್ಪ ಅವರೆಲ್ಲ? ಅದ್ಯಾರೋ ನನಗೆ ಗೊತ್ತಿಲ್ಲ’ ಎಂದು ಪ್ರಕರಣ ವಿಚಾರವಾಗಿ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









